janadhvani

Kannada Online News Paper

ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ

ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ.

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮನೆ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದ್ಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದಿತ್ತು. ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 ಅಡಿ ಧರೆ ಕುಸಿದು ಬಿದ್ದಿತ್ತು. ಶುಕ್ರವಾರ ಮುಂಜಾನೆ ಸುಮಾರು 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.

ಘಟನೆ ನಡೆದ ವೇಳೆ ಮನೆ ಯಜಮಾನ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ, ಪುತ್ರ ಸೀತಾರಾಮ ಮತ್ತು ಅವರ ಪತ್ನಿ ಅಶ್ವಿನಿ ಮಕ್ಕಳಾದ ಆರುಷ್‌, ಆರ್ಯನ್ ಮಲಗಿದ್ದರು. ಸೀತಾರಾಮ ಅವರು ಮನೆಯಿಂದ ಹೊರಬರಲು ಯಶಸ್ವಿಯಾಗಿದ್ದಾರೆ.

ಪ್ರೇಮಾ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಮೃತದೇಹವೂ ಮಣ್ಣಿನಡಿಯಲ್ಲೇ ಇದೆ. ಕಾಂತಪ್ಪ ಪೂಜಾರಿ ಅವರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.

ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54 ವ) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್, ಎರಡು ವರ್ಷ ಪ್ರಾಯದ ಆರುಷ್ ಮೃತಪಟ್ಟಿದ್ದಾರೆ. ಆರುಷ್ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಪ್ರೇಮ ಅವರ ಮೃತದೇಹವನ್ನು ಹುಡುಕಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.