ಅಬುಧಾಬಿ: ಈದ್ ಅಲ್-ಅಧಾ ಸಂದರ್ಭದಲ್ಲಿ 963 ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಘೋಷಿಸಿದ್ದಾರೆ.
ವಿವಿಧ ಅಪರಾಧಗಳಲ್ಲಿ ಶಿಕ್ಷೆಗೊಳಗಾಗಿ ಜೈಲಿನಲ್ಲಿರುವ ಹಲವು ದೇಶಗಳ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಅವರ ಆರ್ಥಿಕ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ.
ಕೈದಿಗಳನ್ನು ಹೊಸ ಜೀವನಕ್ಕೆ ಮರಳುವಂತೆ ಮಾಡುವ ಮಾನವೀಯ ವಿಧಾನದ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಎಇ ಅಧ್ಯಕ್ಷರ ಈ ನಿರ್ಧಾರವು ಕುಟುಂಬ ಸಂಬಂಧಗಳನ್ನು ಬಲಪಡಿಸುವ ಮತ್ತು ಸಮಾಜದಲ್ಲಿ ಸಹಿಷ್ಣುತೆ ಮತ್ತು ಸಹಾನುಭೂತಿಯನ್ನು ಬೆಳೆಸುವ ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.