ಮಂಗಳೂರು: ಮುಖ್ಯಮಂತ್ರಿ ಮತ್ತು ಸ್ಪೀಕರನ್ನು ಅವಹೇಳಿಸಲಾಗಿದೆ ಎಂದು ಆರೋಪಿಸಿ, ಸಮಾಜ ಸೇವಕ, ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರಾ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಎಸ್ ವೈ ಎಸ್ ದಕ ಜಿಲ್ಲಾ ವೆಸ್ಟ್ ಸಮಿತಿ ತೀವ್ರವಾಗಿ ಖಂಡಿಸಿದೆ.
ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕುಷ ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಎಸ್ ವೈ ಎಸ್ ದಕ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುವವರಾಗಿದ್ದಾರೆ.
ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ.
ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಎಸ್ ವೈ ಎಸ್ ದಕ ಜಿಲ್ಲಾ ವೆಸ್ಟ್ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ