ಸರ್ಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿದ ಕಾರಣಕ್ಕೆ ಸಮಾಜ ಸೇವಕ,ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರಾ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ಖಂಡಿಸಿದೆ.
ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕಷ ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಎಸ್ ಜೆ ಎಂ ರಾಜ್ಯ ಸಮಿತಿ ಆಗ್ರಹಿಸಿದೆ.
ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುತ್ತಿದ್ದಾರೆ. ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ. ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಸಮಿತಿ ಅಧ್ಯಕ್ಷರಾದ ಎನ್.ಎ.ಅಬ್ದುರ್ರಹ್ಮಾನ್ ಮದನಿ ಜೆಪ್ಪು , ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ.ಕಾಮಿಲ್ ಸಖಾಫಿ ಸುರಿಬೈಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ
ಮರ್ಕಝುಲ್ ಹುದಾ ತಾಇಫ್ ಸಮಿತಿ: ಸುಲೈಮಾನ್ ತೋಡಾರ್, ರಝ್ಝಾಖ್ ಕೊಡಂಗಾಯಿ, ಲತೀಫ್ ಪೈವಳಿಕೆ ಸಾರಥಿಗಳು