ಟೆಹ್ರಾನ್: ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲಿನ ದಾಳಿಗೆ ತಕ್ಕ ಪರಿಣಾಮಗಳನ್ನು ಅಮೆರಿಕ ಅನುಭವಿಸಬೇಕಾಗುತ್ತದೆ ಎಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಪರಿಣಾಮಗಳನ್ನು ಅನುಭವಿಸಲಿದೆ ಎಂದಿರುವ ಹಿಂದಿನ ವೀಡಿಯೊವನ್ನು ಮರುಹಂಚಿಕೊಳ್ಳುವ ಮೂಲಕ ಖಮನೈ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಮೇಲಿನ ದಾಳಿಯಿಂದ ಅಮೆರಿಕ ತನ್ನ ನಾಶದ ಗುಂಡಿಯನ್ನು ತಾನೇ ತೋಡಿಕೊಂಡಂತೆ ಎಂದು ಹೇಳುವ ವೀಡಿಯೊವನ್ನು ಖಮನೈ ಹಿಂದಿನ ದಿನ ಹಂಚಿಕೊಂಡಿದ್ದರು. ಪರಮಾಣು ಸೌಲಭ್ಯಗಳ ಮೇಲಿನ ದಾಳಿಯ ನಂತರ ಅವರು ಆ ವೀಡಿಯೊವನ್ನು ಮರುಹಂಚಿಕೊಂಡಿದ್ದಾರೆ. ಇರಾನ್ ಎದುರಿಸುತ್ತಿರುವ ಯಾವುದೇ ಹಾನಿಗಿಂತ ಹೆಚ್ಚಿನ ನಾಶ, ನಷ್ಟಗಳನ್ನು ಅಮೆರಿಕ ಎದುರಿಸಬೇಕಾಗುತ್ತದೆ ಎಂದು ಖಮನೈ ಅವರ ವೀಡಿಯೊ ಹೇಳುತ್ತದೆ.
ಫೋರ್ದೋ ಸೇರಿದಂತೆ ಇರಾನ್ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದೆ. ಫೋರ್ದೋ ಜೊತೆಗೆ, ನತನ್ಸ್ ಮತ್ತು ಇಸ್ಫಹಾನ್ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ಬಾಂಬ್ಗಳನ್ನು ಸುರಿಸಿದೆ . ಬಿಗ್ 2 ಬಾಂಬರ್ಗಳು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿ ಸುರಕ್ಷಿತವಾಗಿ ಮರಳಿವೆ. “ಈಗ ಶಾಂತಿಯ ಯುಗ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಏತನ್ಮಧ್ಯೆ, ದಾಳಿಯಿಂದ ಯಾವುದೇ ವಿಕಿರಣವಿಲ್ಲ ಮತ್ತು ನೌಕರರು ಸುರಕ್ಷಿತವಾಗಿದ್ದಾರೆ ಎಂದು ಇರಾನ್ ಹೇಳಿದೆ. ಫೋರ್ದೋ ಸ್ಥಾವರದ ಪ್ರವೇಶದ್ವಾರದಲ್ಲಿ ದಾಳಿ ನಡೆದಿದೆ ಎಂದು ಇರಾನ್ ದೃಢಪಡಿಸಿದೆ. ಎಲ್ಲಾ ಕೇಂದ್ರಗಳಿಂದಲೂ ಜನರನ್ನು ಸ್ಥಳಾಂತರಿಸಲಾಗಿತ್ತು ಎಂದು ಇರಾನ್ ಹೇಳಿದೆ. ಪರಮಾಣು ಕೇಂದ್ರಗಳಲ್ಲಿ ಸಮೃದ್ಧವಾಗಿರುವ ಯುರೇನಿಯಂ ಅನ್ನು ಸಹ ರಹಸ್ಯ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂಬ ವರದಿಗಳಿವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ