ಕರ್ನಾಟಕಕ್ಕೆ ಧಾರ್ಮಿಕ ಬೆಳಕು ಚೆಲ್ಲಿದ ತಾಜುಲ್ ಉಲಮಾರ ಧೀಮಂತ ಪುತ್ರರೂ, ಉಳ್ಳಾಲ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಮೊಹಲ್ಲಾಗಳ ಖಾಝಿಯಾಗಿದ್ದ, ನೊಂದ ಮನಸ್ಸುಗಳಿಗೆ ಸಾಂತ್ವನ ನೀಡುತ್ತಿದ್ದ ಖುರ್ರತುಸ್ಸಾದಾತ್ ಸಯ್ಯಿದ್ ಪಝಲ್ ಕೋಯಮ್ಮ ತಂಙಳ್ ಕೂರತ್ ಅವರ ಪ್ರಥಮ ಉರೂಸ್ ಕಾರ್ಯಕ್ರಮವು 2025 ಜೂನ್ 26,27,28,29 ದಿನಾಂಕಗಳಲ್ಲಿ ಕಡಬ ತಾಲೂಕಿನ ಕೂರತ್ ಎಂಬಲ್ಲಿ ನಡೆಯಲಿದೆ.
ಪತಾಕೆ ಜಾಥಾ, ಖತ್ಮುಲ್ ಖುರ್ಆನ್, ಉದ್ಘಾಟನಾ ಸಮಾರಂಭ, ಸ್ವಲಾತ್ ಮಜ್ಲಿಸ್, ಬುರ್ದಾ ಮಜ್ಲಿಸ್, ಅಹ್ಲುಲ್ ಅಬಾಅ್ ಮೌಲಿದ್, ‘ನೂರೇ ಫಝಲ್’ ಕಾನ್ಫರೆನ್ಸ್, ಮಂಕೂಸ್ ಮೌಲಿದ್, ತಾಜುಲ್ ಉಲಮಾ ಮೌಲಿದ್, ರಿಫಾಈ ರಾತೀಬ್ ಮಜ್ಲಿಸ್, ಮೊಹಲ್ಲಾ ಸಂಗಮ, ಸಾಮಾಜಿಕ ಕಾರ್ಯಕ್ರಮ, ಉರೂಸ್ ಸಮಾರೋಪ ಸಮಾರಂಭ ಮತ್ತು ಮಹಾ ಅನ್ನದಾನ ಸಹಿತ ವಿಭಿನ್ನ ಕಾರ್ಯಕ್ರಮಗಳು ನಡೆಯಲಿದ್ದು, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್, ರಈಸುಲ್ ಉಲಮಾ ಇ. ಸುಲೈಮಾನ್ ಉಸ್ತಾದ್, ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ತಂಙಳ್ ಕಡಲುಂಡಿ, ಅಸ್ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಸಹಿತವಿರುವ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ನಾಯಕರು ಭಾಗವಹಿಸಲಿರುವ ಉರೂಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲೆ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ