ಕುಂದಾಪುರ: ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ ‘ಸೌಹಾರ್ದ ಸಂಚಾರ’ಕ್ಕೆ ಇಂದು ಬೆಳಗ್ಗೆ 9ಗಂಟೆಗೆ ಕುಂದಾಪುರದಲ್ಲಿ ಚಾಲನೆ ನೀಡಲಾಯಿತು.
ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ
ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು ಅವರು ಕುಂದಾಪುರ ಸಯ್ಯಿದ್ ಯೂಸುಫ್ ವಲಿಯುಲ್ಲಾಹಿ ದರ್ಗಾ ಝಿಯಾರತ್ ಮೂಲಕ ಚಾಲನೆ ನೀಡಿದರು.
ಶಾಸ್ತ್ರೀ ಪಾರ್ಕ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಾದಿ ಉದ್ಘಾಟಿಸಿದರು. ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಎಂ ಅಬೂಬಕರ್ ಸಿದ್ದೀಕ್ ಕಾರ್ಯಕ್ರಮ ನಿರೂಪಿಸಿದರು.
ಬೈಂದೂರು ಹಲಗೇರಿ ಜೋಗಿ ಮನೆಯ ಶ್ರೀ ವಸಂತನಾಥ ಗುರೂಜಿ, ಕ್ರೈಸ್ತ ಧರ್ಮಗುರು ರೆ.ಫಾ. ನೋವೆಲ್ ಬ್ರಹ್ಮಾವರ್, ಪತ್ರಕರ್ತ ಶಶಿಧರ ಹೆಮ್ಮಾಡಿ ಮಾತನಾಡಿದರು.
ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ರಾಮಕೃಷ್ಣ ಹೆರ್ಲೆ ,ಸಹಬಾಳ್ವೆ ಕುಂದಾಪುರ, ಚಂದ್ರಶೇಖರ ದೇವಾಡಿಗ, ಮಹಾಬಲ , ವಿಲ್ಸನ್ ಅಲ್ಮೆಡ ಕುಂದಾಪುರ, ವಿಕಾಸ್ ಹೆಗ್ಡೆ , ರೋಷನ್ ಶೆಟ್ಟಿ ,ಹರಿಪ್ರಸಾದ್ ಶೆಟ್ಟಿ ,ಇಬ್ರಾಹಿಂ ಸಖಾಫಿ ಪಯೋಟ, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್, ಇಸ್ಹಾಖ್ ಝುಹ್ರಿ ಕಾನಕೆರೆ, ಮಹ್ಬೂಬ್ ಸಖಾಫಿ ಕಿನ್ಯ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಅಶ್ರಪ್ ಎಮ್ಮೆಮಾಡು, ಅತ್ತಾವುಳ್ಳ ಮೈಸೂರು, ಇಬ್ರಾಹಿಂ ಮೂಡಿಗೆರೆ, ನವಾಝ್ ಸಖಾಫಿ ಅಡ್ಯಾರ್ ಮೊದಲಾದವರು ಉಪಸ್ಥಿತರಿದ್ದರು.
ಅಡ್ವಕೇಟ್ ಇಲ್ಯಾಸ್ ನಾವುಂದ ಸ್ವಾಗತಿಸಿ, ಕೌನ್ಸಿಲರ್ ಅಬೂ ಮುಹಮ್ಮದ್ ಧನ್ಯವಾದ ಸಲ್ಲಿಸಿದರು.


ಕರಾವಳಿಯ ಮಣ್ಣಿನಲ್ಲಿ ಸೌಹಾರ್ಧದ ಸಂದೇಶ ವ್ಯಾಪಕ ಗೊಳಿಸುವ ಈ ಪ್ರಯತ್ನ ಐತಿಹಾಸಿಕ ಹೆಜ್ಜೆಯಾಗಿದೆ. ಇದೇ ಬರುವ ಬುಧವಾರ 16ನೇ ತಾರೀಖು ಸುಳ್ಯದಲ್ಲಿ ಸಮಾಪ್ತಿ ಸಂಗಮ ನಡೆಯಲಿದೆ. ವಿವಿಧ ಭಾಗಗಳಲ್ಲಿ ಸಂಚಾರದಲ್ಲಿ ಪಾಲ್ಗೊಂಡು ಐತಿಹಾಸಿಕಗೊಳಿಸಿ ಕೋಮುವಾದದ ವಿಷಬೀಜವನ್ನು ಕಿತ್ತೆಸೆಯೋಣ.
















ಇನ್ನಷ್ಟು ಸುದ್ದಿಗಳು
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ