ಕೋಝಿಕ್ಕೋಡ್ | ನಿಮಿಷಪ್ರಿಯ ಅವರ ಮರಣದಂಡನೆಯನ್ನು ರದ್ದುಗೊಳಿಸಲು ಒಪ್ಪಿಗೆ ಲಭಿಸಿರುವುದಾಗಿ ಭಾರತೀಯ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಿಸಿದೆ. ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚರ್ಚೆಗಳ ಆಧಾರದ ಮೇಲೆ ಮರಣದಂಡನೆಯನ್ನು ರದ್ದುಗೊಳಿಸಲು ಮತ್ತು ಇತರ ವಿಷಯಗಳ ಬಗ್ಗೆ ನಿರ್ಧರಿಸಲು ಒಪ್ಪಿಗೆ ನೀಡಲಾಗಿದೆ.ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೈಖ್ ಉಮರ್ ಬಿನ್ ಹಫೀಝ್ ತಂಙಳ್ ನೇಮಿಸಿದ ಯೆಮೆನ್ ವಿದ್ವಾಂಸರ ನಿಯೋಗದ ಜೊತೆಗೆ, ಉತ್ತರ ಯೆಮೆನ್ ಆಡಳಿತಗಾರರು ಮತ್ತು ಅಂತರರಾಷ್ಟ್ರೀಯ ರಾಜತಾಂತ್ರಿಕರು ಭಾಗವಹಿಸಿದ್ದ ಮಧ್ಯಸ್ಥಿಕೆ ಮಾತುಕತೆಯ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೃತ ತಲಾಲ್ ಅವರ ಕುಟುಂಬದೊಂದಿಗೆ ಹೆಚ್ಚಿನ ಚರ್ಚೆಗಳ ನಂತರ ಇತರ ವಿಷಯಗಳನ್ನು ನಿರ್ಧರಿಸಲಾಗುತ್ತದೆ. ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಕಾಂತಪುರಂ ಅವರ ಮಧ್ಯಪ್ರವೇಶ ನಂತರ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ