ಹೊಸದಿಲ್ಲಿ: ತೀವ್ರ ವಿರೋಧದ ನಡುವೆ ತ್ರಿವಳಿ ತಲಾಖ್ ನಿಷೇಧಮಾಡಿದ್ದ ಕೇಂದ್ರ ಸರಕಾರವೀಗ ನಿಖಾ ಹಲಾಲ ಮತ್ತು ಬಹುಪತ್ನಿತ್ವವನ್ನು ಕ್ರಿಮಿನಲ್ ಅಪರಾಧದಡಿ ತರಲು ಸಿದ್ಧತೆ ನಡೆಸಿದೆ. ಇವೆರಡು ಪದ್ಧತಿಗಳು ಅಸಾಂವಿಧಾನಿಕ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನಿಲ್ಲಲು ಕೇಂದ್ರ ನಿರ್ಧರಿಸಿದೆ.
ನಿಖಾ ಹಲಾಲ (ವಿಚ್ಛೇದಿತ ಪತ್ನಿ ಮರುಮದುವೆ ನಿಯಮಗಳು) ಎನ್ನುವುದು ,ವಿಚ್ಛೇದಿತ ದಂಪತಿ ಮರು ಮದುವೆಯಾಗಲು ಬಹುದೊಡ್ಡ ತೊಡಕಾಗಿ ಪರಿಣಮಿಸಿದೆ. ಇದರ ಪ್ರಕಾರ, ಪರಿತ್ಯಕ್ತ ಪತಿಯನ್ನು ಪುನಃ ವರಿಸಲು ಕೆಲ ಪ್ರಕ್ರಿಯೆಯನ್ನು ಪೂರೈಸಬೇಕಾಗುತ್ತದೆ. ಇಲ್ಲಿ ಮಹಿಳೆ ಇನ್ನೊಬ್ಬನನ್ನು ಮದುವೆಯಾಗಿ ವಿಚ್ಛೇದನ ಪಡೆಯಬೇಕು ಅಥವಾ ಆ ಎರಡನೇ ಪತಿ ಮರಣ ಹೊಂದಿರಬೇಕು.
ಬಹುಪತ್ನಿತ್ವ ಎನ್ನುವುದು ಮುಸ್ಲಿಂ ಸಮುದಾಯದಲ್ಲಿ ಪ್ರಚಲಿತದಲ್ಲಿದ್ದು ಒಂದಕ್ಕಿಂತ ಹೆಚ್ಚು ಮಹಿಳೆಯರನ್ನು ಮದುವೆಯಾಗುವ ಅವಕಾಶ ಕಲ್ಪಿಸಿದೆ. ಈ ಎರಡು ಪದ್ಧತಿಗಳು ಮಹಿಳಾ ವಿರೋಧಿಯಾಗಿದ್ದು, ನಿಷೇಧಗೊಳ್ಳಲೇಬೇಕಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಅರ್ಜಿ ವಿಚಾರಣೆ ನಡೆಸಲು ಒಪ್ಪಿದ್ದ ಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಈ ಹಿಂದೆ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ