ನವದೆಹಲಿ | ಉತ್ತರ ಪ್ರದೇಶದ ಫತ್ಹೇಪುರದಲ್ಲಿ ಶತಮಾನಗಳಷ್ಟು ಹಳೆಯದಾದ ಸಮಾಧಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಬಿಜೆಪಿ ನಾಯಕರು ಸೇರಿದಂತೆ 150 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ, ಸಂಘ ಪರಿವಾರದ ಕಾರ್ಯಕರ್ತರ ಗುಂಪಿನ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಖಲಾಲ್ ಪಾಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಘರ್ಷಣೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಸಮಾಧಿಯ ಸುತ್ತಲೂ ಬಿಗಿ ಭದ್ರತೆಯನ್ನು ಏರ್ಪಡಿಸಿದ್ದಾರೆ.
ಸಮಾಧಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರು ಕಳೆದ ದಿನ ಕೆಡವಲು ಪ್ರಯತ್ನಿಸಿದರು. ಫತ್ಹೇಪುರ್ ಜಿಲ್ಲೆಯ ಸದರ್ ತಹಸಿಲ್‌ನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಈ ಸಮಾಧಿಯು ಮೊಘಲ್ ಯುಗದಲ್ಲಿ ಆಗ್ರಾ-ಔದ್ ಪ್ರಾಂತ್ಯದ ಭಾಗವಾಗಿದ್ದ ಛಾತಾರಿ ಮತ್ತು ತಾಲಿಬ್‌ನಗರದ ನವಾಬ್ ಅಬ್ದುಲ್ ಸಮದ್ ಅವರದ್ದಾಗಿದೆ ಎಂದು ಇತಿಹಾಸ ದಾಖಲೆಗಳು ಹೇಳುತ್ತವೆ.
ಈ ಪ್ರದೇಶದಲ್ಲಿ ಮುಸ್ಲಿಮರು ಯುಗಯುಗಗಳಿಂದ ನಿರ್ವಹಿಸುತ್ತಿದ್ದ ಸಮಾಧಿಯ ಮೇಲಿನ ದಾಳಿಯು ಕೋಮು ಗಲಭೆಗಳನ್ನು ಸೃಷ್ಟಿಸುವ ಯೋಜಿತ ನಡೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಿಂದುತ್ವ ಕಾರ್ಯಕರ್ತರ ಗುಂಪೊಂದು ಬಲವಂತವಾಗಿ ಸಮಾಧಿಯೊಳಗೆ ಪ್ರವೇಶಿಸಿ ಹಾನಿ ಮಾಡಿದೆ. ಸಮಾಧಿಯ ಗೋಡೆಯ ಕೆಲವು ಭಾಗಗಳು ಸಹ ಹಾನಿಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದಾಳಿಕೋರರು ಸ್ಥಳದಿಂದ ಪರಾರಿಯಾಗುವ ಮೊದಲು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ