ಮರಿಕ್ಕಳ: ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ 5 ನೇ ಆಂಡ್ -ಅನುಸ್ಮರಣೆಯು ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ನೇತೃತ್ವದಲ್ಲಿ ಆಗಸ್ಟ್ 24 ಆದಿತ್ಯವಾರ ಬೆಳಿಗ್ಗೆ 9:00 ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿರುವುದು.
ಮರಿಕ್ಕಳ ಜಮಾಅತ್ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿರೋಡ್ ಉದ್ಘಾಟಿಸಲಿದ್ದಾರೆ.
ಮೌಲಾನಾ ಅಬ್ದುರ್ರಹ್ಮಾನ್ ಸಖಾಫಿ ಪೇರೋಡ್ ಉಸ್ತಾದರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಮರಿಕ್ಕಳ ಜಮಾಅತ್ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಯ್ಯಿದ್ ಅಶ್ರಫ್ ತಂಙಳ್ ಆದೂರು, ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್,ವಕ್ಫ್ ಸಲಹಾ ಉಪಾಧ್ಯಕ್ಷ ಶಾಫಿ ಸಅದಿ ಬೆಂಗಳೂರು,ಮರಿಕ್ಕಳ ಮುದರ್ರಿಸ್ ಇರ್ಫಾನ್ ಸಖಾಫಿ ಅಲ್ ಅರ್ಷದಿ ವೇಣೂರು,ಮಾಜಿ ಮುದರ್ರಿಸ್ ಅಬ್ಬಾಸ್ ಸಖಾಫಿ ಅಲ್ ಅರ್ಷದಿ ಕೊಟ್ಟಮುಡಿ, ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ,ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ,ಮುಹನ್ಮದ್ ಪಾಝಿಲ್ ರಝ್ವಿ ಕಾವಲ್ಕಟ್ಟೆ,,ಬಶೀರ್ ಸಖಾಫಿ ಪೀಣ್ಯ,ಹಾಫಿಳ್ ಸುಫ್ಯಾನ್ ಸಖಾಫಿ,ಅಬ್ದುರ್ರಹ್ಮಾನ್ ಮದನಿ ಜೆಪ್ಪು ಮೊದಲಾದ ಧಾರ್ಮಿಕ,ಸಾಮಾಜಿಕ,ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







