“ಪ್ರವಾದಿ ﷺ ರವರು ಕಾಲಾತೀತ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ ಪ್ರವಾದಿ ﷺ ರವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಸಿಎಫ್ ಮುಹರ್ರಕ್ ಸೆಕ್ಟರ್ ವತಿಯಿಂದ ಉಮ್ಮುಲ್ ಹಸ್ಸಂ ಬ್ಯಾಂಕ್ ಕೋಂಗ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಹಾರಿಸ್ ಒಕ್ಕೆತ್ತೂರ್ ರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಸಿದ್ದೀಖ್ ಉಸ್ತಾದರು ದುಆಗೖದರು. ಐಸಿಎಫ್ ನಾಯಕರಾದ ಅಝ್ಹರ್ ತಂಙಳ್ ರವರು ಮೌಲಿದ್ ಮಜ್ಲಿಸಿಗೆ ನೇತೃತ್ವ ನೀಡಿದರು. ಶಾಕಿರ್ ಪೖಂಬಚ್ಚಾಲ್ ಖಿರಾಅತ್ ಪಠಿಸಿದರು. ರಾಷ್ಟ್ರೀಯ ಸಮಿತಿ ಎಕ್ಸಿಕ್ಯೂಟಿವ್ ಸದಸ್ಯರಾದ ಅಬೂಬಕರ್ ಮದನಿ ಉಸ್ತಾದ್ ಮಂಚಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ನೋರ್ತ್ ಝೋನ್ ಅಧ್ಯಕ್ಷರಾದ ಅಹ್ಮದ್ ಮುಸ್ಲಿಯಾರ್ ಗಟ್ಟಮನೆ, ಐಸಿಎಫ್ ಪಬ್ಲಿಕೇಶನ್ ಕಾರ್ಯದರ್ಶಿ ಅಬ್ದುಸ್ಸಮದ್ ಕಕ್ಕಡವು ಕಾರ್ಯಕ್ರಮಕ್ಕೆ ಶುಭ ಹಾರೖಸಿದರು.
ಲೋಕಕ್ಕೆ ಶಾಂತಿಯನ್ನು ಹಾಗೂ ಸಮಾಧಾನದ ಸಂದೇಶವನ್ನು ನೀಡಿದ ಪ್ರವಾದಿ ﷺ ರು ಪ್ರತಿಯೊಂದು ಜೀವಿಗಳಲ್ಲಿಯೂ ಕಾರುಣೆ ತೋರುತ್ತಿದ್ದರು. ಯಾರನ್ನೂ ಕೂಡಾ ಅಕ್ರಮಿಸುವುದಾಗಲೀ, ಉಪದ್ರವಿಸುವುದಾಗಲೀ ಅವರಿಂದ ಉಂಟಾಗಲಿಲ್ಲ, ಮಾತ್ರವಲ್ಲ ಅದನ್ನು ಅವರು ವಿರೋಧಿಸುತ್ತಿದ್ದರು ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕರ್ನಾಟಕ ಸುನ್ನೀ ಜಂಇಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಬಹು. ಟಿ. ಎಂ. ಮುಹ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ ಉಸ್ತಾದರು ಹೇಳಿದರು.
ಕೆಸಿಎಫ್ ರಾಷ್ಟ್ರೀಯ, ಝೋನಲ್, ಸೆಕ್ಟರ್, ಯೂನಿಟ್’ಗಳ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ನೋರ್ತ್ ಝೋನ್ ಸಂಘಟನಾ ಕಾರ್ಯದರ್ಶಿ ರಶೀದ್ ಈಶ್ವರಮಂಗಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟೀಯ ಸಮಿತಿ ವೃತ್ತಿಪರ ಇಲಾಖೆ ಕಾರ್ಯದರ್ಶಿ ಲತೀಫ್ ಪೆರೋಲಿ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ