ವಿಟ್ಲ: ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಡಾ.ಝೈನಿ ಕಾಮಿಲ್ ಸಖಾಫಿಯವರನ್ನು ದಾರುಲ್ ಅಶ್ಅರಿಯ್ಯಾ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಸಮಾರಂಭದಲ್ಲಿ ಸಯ್ಯಿದ್ ಯು.ಎಸ್ ಶಿಹಾಬುದ್ದೀನ್ ತಂಙಳ್ ಮದಕ, ಸಂಸ್ಥೆಯ ಮುಖ್ಯಸ್ಥರಾದ ಮುಹಮ್ಮದಲಿ ಸಖಾಫಿ, ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.






