ನವದೆಹಲಿ: ಗೋ ರಕ್ಷಣೆಯ ಹೆಸರಿನಲ್ಲಿ ಗುಂಪುಗಳು ನಡೆಸುವ ಹಿಂಸಾಚಾರವು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಅಷ್ಟೇ ಅಲ್ಲ, ಅದು ಅಪರಾಧ. ಇಂತಹ ಅಪರಾಧಗಳು ನಡೆಯದಂತೆ ತಡೆಯುವುದು ರಾಜ್ಯ ಸರ್ಕಾರಗಳ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೇಶದಲ್ಲಿ ಇಂತಹ ಕೃತ್ಯಗಳನ್ನು ತಡೆಯುವುದಕ್ಕೆ ಮಾರ್ಗದರ್ಶಿಸೂತ್ರಗಳನ್ನು ರೂಪಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ತೀರ್ಪನ್ನು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಕಾಯ್ದಿರಿಸಿದೆ.
ಗುಂಪುಗಳು ನಡೆಸುವ ಹಲ್ಲೆಗಳು ಗಂಭೀರ ವಿಚಾರ ಎಂದಿರುವ ಪೀಠವು, ಇಂತಹದ್ದೇ ಉದ್ದೇಶಕ್ಕಾಗಿ ಹಿಂಸೆ ನಡೆಯುತ್ತಿದೆ ಎಂದು ಸೀಮಿತ ಅರ್ಥದಲ್ಲಿ ಅದನ್ನು ನೋಡಲಾಗದು ಎಂದಿದೆ.
ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ಗೋರಕ್ಷಕರಿಂದ ಹಲ್ಲೆ ಪ್ರಕರಣಗಳು ನಿಂತಿಲ್ಲ ಎಂದು ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರ ಪರವಾಗಿ ವಾದಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿದರು.
ಜಾರಿಗೆ ಬಾರದ ನಿರ್ದೇಶನ: ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಳೆದ ಸೆಪ್ಟೆಂಬರ್ 6ರಂದು ಸುಪ್ರೀಂ ಕೋರ್ಟ್ ಪೀಠವು ಸೂಚನೆಗಳನ್ನು ನೀಡಿತ್ತು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ಒಂದು ವಾರದೊಳಗೆ ನೇಮಿಸಬೇಕು. ಗುಂಪು ಹಿಂಸೆ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ