ರಿಯಾದಿನ ಮುಲ್ಹಿಂ ನಲ್ಲಿ ಮರಣ ಹೊಂದಿದ ಇಜಾಝ್ ಅಹ್ಮದ್ ಕಾಸರ್ಕೋಟ್ ಝೈನುಲ್ ಆಬಿದೀನ್ ರವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಮರಣ ಹೊಂದಿದ ಮಾಹಿತಿ ತಿಳಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ಸ್ಥಳಕ್ಕೆ ತೆರಳಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ರಿಯಾದ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ, ಕೆಸಿಎಫ್ ರಾಷ್ಟ್ರೀಯ ಸಾಂತ್ವನ ಇಲಾಖೆ ಅಧ್ಯಕ್ಷ ಭಾಷಾ ಗಂಗಾವಳಿ, ಮೃತರ ಅಣ್ಣ ಖಲೀಫಾ ಮುಹಮ್ಮದ್ ಝಕರಿಯಾ ಮತ್ತು ಮಗ ಮುಹಮ್ಮದ್ ಮಾಝಿನ್ ಖಲೀಫಾ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಕುಟುಂಬಸ್ಥರು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.
ರಿಯಾದಿನ ಅಲ್ ರಾಜಿ ಮಸ್ಜಿದ್‌ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಗೆ ಮೃತದೇಹವನ್ನು ಕೊಂಡೊಯ್ಯಲಾಯಿತು.
ನಸೀಂನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷ ಮಜೀದ್ ವಿಟ್ಲ ಮತ್ತು ಶಿಕ್ಷಣ ಇಲಾಖೆ ಅಧ್ಯಕ್ಷ ದಾವೂದ್ ಸಅದಿ ವಹಿಸಿದ್ದರು. ಹಾರಾ ಯುನಿಟ್ ಅಧ್ಯಕ್ಷ ರಝಾಕ್ ಮುಸ್ಲಿಯಾರ್, ಅಶ್ರಫ್ ಕೆಎಂಎಸ್ ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು, ಗೆಳೆಯರು, ಸ್ಥಳೀಯರು ಪಾಲ್ಗೊಂಡಿದ್ದರು. ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್