ರಿಯಾದ್: ಮುಂಬರುವ ಗಂಟೆಗಳಲ್ಲಿ ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಂಜು ಮತ್ತು ಧೂಳಿನ ಬಿರುಗಾಳಿ ಉಂಟಾಗಲಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಪ್ರಕಟಿಸಿದೆ.
ಭಾರೀ ಮಂಜಿನ ಸಾಧ್ಯತೆ ಇರುವುದರಿಂದ ಮಕ್ಕಾ, ಅಲ್-ಜವ್ಫ್ ಮತ್ತು ಉತ್ತರ ಗಡಿ ಪ್ರಾಂತ್ಯಗಳಿಗೆ ‘ರೆಡ್ ಅಲರ್ಟ್’, ಅಂದರೆ ಹೈ-ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಗೋಚರತೆ ಒಂದು ಕಿಲೋಮೀಟರ್ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.
ಮಕ್ಕಾ, ಅಲ್-ಬಹಾ, ಅಸೀರ್ ಮತ್ತು ಜಿಝಾನ್ ಪ್ರದೇಶಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ಪೂರ್ವ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಬಲವಾದ ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಜುಬೈಲ್, ಖೋಬರ್, ದಮ್ಮಾಮ್, ಖತೀಫ್ ಮತ್ತು ರಾಸ್ ತನುರಾ ಪ್ರದೇಶಗಳಿಗೆ ಧೂಳಿನ ಬಿರುಗಾಳಿಯ ಎಚ್ಚರಿಕೆಗಳನ್ನು ನೀಡಲಾಗಿದೆ.
ಈ ಪರಿಸ್ಥಿತಿ ಬೆಳಿಗ್ಗೆ 1 ರಿಂದ ಬೆಳಿಗ್ಗೆ 9 ರವರೆಗೆ ಇರಲಿದೆ. ಗಾಳಿ ಬಲಗೊಂಡಂತೆ ಗೋಚರತೆ 3 ರಿಂದ 5 ಕಿ.ಮೀ.ಗೆ ಕಡಿಮೆಯಾಗಲು ಸಾಧ್ಯತೆಯಿದೆ.
ಆದ್ದರಿಂದ ವಾಹನ ಚಾಲಕರು ಅತ್ಯಂತ ಜಾಗರೂಕರಾಗಿರಲು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚಾಲಕರು ಮತ್ತು ಉಸಿರಾಟದ ತೊಂದರೆ ಇರುವವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ