ನವದೆಹಲಿ : ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ಸುಪ್ರೀಂಕೋರ್ಟ್ ನ್ಯಾಯಪೀಠ, ಇಷ್ಟ ಇಲ್ಲದಿದ್ರೆ ತಾಯಿಯಾಗಬಾರದು ಎಂದು ಅಪ್ರಾಪ್ತೆಯ 30 ವಾರಗಳ ಗರ್ಭವನ್ನು ಕೊನೆಗೊಳಿಸಲು ಅನುಮತಿ ನೀಡಿದೆ.
ತನ್ನ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿತು. ಆಕೆಯ ಇಚ್ಛೆಯ ವಿರುದ್ಧ ಗರ್ಭವನ್ನು ಮುಂದುವರಿಸಲು ಒತ್ತಾಯಿಸಲಾಗದು ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ದ್ವಿಸದಸ್ಯ ಪೀಠವು ಆದೇಶ ನೀಡಿದೆ.
ಬಾಲಕಿ ಅಪ್ರಾಪ್ತೆಯಾಗಿದ್ದಾಗ ಯುವಕನೊಂದಿಗಿನ ಸಂಬಂಧದಲ್ಲಿ ಗರ್ಭ ಧರಿಸಿದ್ದಳು. ಇದು ಸಮ್ಮತಿಯಿಂದ ಆಗಿರಲಿ ಅಥವಾ ಇಲ್ಲದಿರಲಿ, ಬಾಲಕಿ ಮಗುವನ್ನು ಹೊರುವ ಇಚ್ಛೆಯನ್ನು ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತಿಯೇ ಆಗಲಿ ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.
ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು. ಹೀಗಾಗಿ, ಬಾಲಕಿಗೆ ಗರ್ಭಪಾತ ಮಾಡಿಸಲು ಅನುಮತಿ ನೀಡಲಾಗಿದೆ.
ಭಾರತದ ಕಾನೂನಿನಲ್ಲಿ ಗರ್ಭಪಾತಕ್ಕೆ ಅನುಮತಿ ಇದೆಯೇ?
ಭಾರತದಲ್ಲಿ ಗರ್ಭಪಾತಕ್ಕೆ ಅನುಮತಿಯಿದೆ. 1971ರ ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ಮಹಿಳೆಗೆ ಸುರಕ್ಷಿತ ಗರ್ಭಪಾತಕ್ಕೆ ಅನುಮತಿ ನೀಡಿದೆ.
ಕೆಲವೊಂದು ಸಂದರ್ಭದಲ್ಲಿ ಮಹಿಳೆ 24 ವಾರಗಳ ಗರ್ಭಿಣಿಯಾದರೂ ಗರ್ಭಪಾತ ಮಾಡಿಸಬಹುದು. ಇನ್ನು ತಾಯಿಯ ಪ್ರಾಣಕ್ಕೆ ಅಪಾಯವಿದ್ದಾಗ ಅಥವಾ ಮಗುವಿನಲ್ಲಿ ನ್ಯೂನತೆಯಿದ್ದಾಗ ಯಾವುದೇ ತಿಂಗಳಿನಲ್ಲಿ ಗರ್ಭಪಾತ ನೀಡಲು ಅನುಮತಿ ಇದೆ.
ಅತ್ಯಾಚಾರದಿಂದ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆದು ಹಾಕಲು ಅನುಮತಿ ನೀಡಲಾಗುವುದು. ಅಪ್ರಾಪ್ತ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆಸಲು ಅನುಮತಿ ನೀಡಲಾಗುವುದು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ