ಟೆಹ್ರಾನ್: ಇರಾನ್‌ನ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸುಮಾರು 180 ಹೆಣ್ಣುಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇರಾನ್ ವಿರುದ್ಧದ ಕಾರ್ಯಾಚರಣೆಯ ಮೊದಲ ದಿನದಂದೇ ಈ ದಾಳಿ ನಡೆದಿದೆ. ಇತ್ತೀಚೆಗೆ ಗಾಂಧಿ ಆಸ್ಪತ್ರೆಯ ಮೇಲೆ ನಡೆದ ದಾಳಿಯೂ ಇದೇ ಮಾದರಿಯಲ್ಲಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ಮೊದಲ ದಿನ ದಾಳಿ ನಡೆಸಲಾಗಿತ್ತು. ಶನಿವಾರ ಬೆಳಿಗ್ಗೆ ತರಗತಿಗಳು ನಡೆಯುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ದಾಳಿಯಿಂದಾಗಿ ಭಾಗಶಃ ಧ್ವಂಸಗೊಂಡು ಹೊಗೆಯಾಡುತ್ತಿರುವ ಕಟ್ಟಡದ ಸುತ್ತ ನೂರಾರು ಜನರು ಜಮಾಯಿಸಿದ್ದು, ಅವಶೇಷಗಳು ರಸ್ತೆಯುದ್ದಕ್ಕೂ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಕಂಡುಬಂದಿವೆ. ಈ ಶಾಲಾ ಕಟ್ಟಡವು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC) ಬ್ಯಾರಕ್‌ನ ಪಕ್ಕದಲ್ಲೇ ಇತ್ತು.
“ಸಾವಿರಾರು ಕನಸುಗಳೊಂದಿಗೆ ಶಾಲೆಗೆ ಬಂದ ಹೆಣ್ಣುಮಕ್ಕಳ ಜೀವನವನ್ನು ಕ್ರೂರವಾಗಿ ಕೊನೆಗೊಳಿಸಲಾಗಿದೆ,” ಎಂದು ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲ ಯೂಸುಫ್‌ಝಾಯ್ ಪ್ರತಿಕ್ರಿಯಿಸಿದ್ದಾರೆ.
ನಾಗರಿಕರಿಗೆ ಹಾನಿಯಾಗಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ಈ ಬಗ್ಗೆ ತನಿಖೆ ನಡೆಸುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ (US Central Command) ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ