ಚಿಕ್ಕಮಗಳೂರು ಮಾರ್ಚ್ 04/2026 ರಂದು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದೆ ದಿನಾಂಕ 19.07.2022 ರ ಸರ್ಕಾರದ ಆದೇಶ ಸಂಖ್ಯೆ RD/114/MuDaPra/2022 ಅನ್ವಯ, ಪವಿತ್ರ ಗುಹೆಯೊಳಗಿನ ಗೋರಿಗಳಿಗೆ ಗಂಧ ಲೇಪನ, ಚಾದರ್ ಸಮರ್ಪಣೆ, ಹೂವಿನ ಅಲಂಕಾರ ಹಾಗೂ ಇಸ್ಲಾಮಿಕ್ ವಿಧಿವಿಧಾನಗಳ ಪ್ರಕಾರ ಪ್ರಾರ್ಥನೆ ಮಾಡಲು ಅವಕಾಶ ಇದ್ದು ಸಹ ಸರ್ಕಾರದ ವಿರುದ್ಧವಾಗಿ ನಡೆದುಕೊಂಡಿದೆ .


ಹಾಗೂ ಮಾನ್ಯ ಸುಪ್ರೀಂ ಕೋರ್ಟ್ ಆದೇಶ SLP (C) No. 10131/2023 ಅನುಸರಿಸಿ ಪರಂಪರೆಯ ವಿಧಿವಿಧಾನಗಳನ್ನು ಆಚರಿಸಲು ಶಾಖಾದ್ರಿ ಯವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಅನುಮತಿಸಿರುವ ಆದೇಶಕ್ಕೆ ಸಂಪೂರ್ಣ ಉಲ್ಲಂಘನೆ ಮಾಡಿದೆ ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರಾದ ಆಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ದೂರಿದ್ದಾರೆ .
ಸರ್ಕಾರದ ಆದೇಶ ಮತ್ತು ಶತಮಾನಗಳ ಸಂಪ್ರದಾಯದಂತೆ ಶಾಂತಿಯುತವಾಗಿ ಉರುಸ್ ಆಚರಣೆ ನಡೆಯಬೇಕು ಎಂಬುದು ನಮ್ಮ ಒತ್ತಾಯದೊಂದಿಗೆ ಇಂದು ಬಾಬಾ ಬುಡನ್ ದರ್ಗಾದಲ್ಲಿ ಸಂದಲ್ ಮತ್ತು ಉರುಸ್ ಕಾರ್ಯಕ್ರಮವು ಆಯೋಜಿಸಲಾಗಿತ್ತು ಆದರೆ ಜಿಲ್ಲಾಡಳಿತವು ಇಸ್ಲಾಂ ಧರ್ಮದ ಸೂಫಿ ಸಂತರ ಸಂಪ್ರದಾಯದಂತೆ ನೆರವೇರಿಸಲು ಅವಕಾಶ ಮಾಡಿ ಕೊಡಲು ನಿರಾಕರಿಸಿತು ಆದ್ದರಿಂದ ಶಾಖಾದ್ರಿ ಮತ್ತು ಸಮುದಾಯದ ವತಿಯಿಂದ ಉರುಸ್ ಕಾರ್ಯಕ್ರಮವನ್ನು ಬಹಿಷ್ಕರಿಸಿಲಾಯಿತು ಜಿಲ್ಲಾಡಳಿತವು ಸರ್ಕಾರದ ಆದೇಶದ ವಿರುದ್ಧ ಮತ್ತು ನ್ಯಾಯಾಲಯದ ಉಲ್ಲಂಘನೆ ಮಾಡಿದೆ ಅದಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಶಾಖಾದ್ರಿ ಯವರು ಮಾನ್ಯ ಗೌಸ್ ಮೊಹಿದ್ದೀನ್ ಶಾಖಾದ್ರಿ ಮತ್ತು ಸಮುದಾಯದ ಮುಖಂಡರ ಪರವಾಗಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖ್ಯಸ್ಥರಾದ ಆಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ನಿರ್ಧರಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ