ನವದೆಹಲಿ: ಯುಎಸ್-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮಾನೈ ಅವರ ನಿಧನಕ್ಕೆ ಭಾರತ ಸರ್ಕಾರ ಅಧಿಕೃತವಾಗಿ ಸಂತಾಪ ಸೂಚಿಸಿದೆ. ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಂತಾಪ ಸೂಚಕ ಪುಸ್ತಕದಲ್ಲಿ ಸಹಿ ಹಾಕುವ ಮೂಲಕ ಭಾರತದ ಪರವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.
ದೇಶದಲ್ಲಿ ರಾಜಕೀಯ ಟೀಕೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ವಿದೇಶಾಂಗ ಕಾರ್ಯದರ್ಶಿಯವರು ಖುದ್ದಾಗಿ ರಾಯಭಾರ ಕಚೇರಿಗೆ ಭೇಟಿ ನೀಡಿರುವುದು ಗಮನಾರ್ಹ. ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಮಿಸ್ರಿ, ಭಾರತದ ಗೌರವ ಮತ್ತು ದುಃಖವನ್ನು ವ್ಯಕ್ತಪಡಿಸಿ ಅಲ್ಲಿಂದ ನಿರ್ಗಮಿಸಿದರು.
ವಿರೋಧ ಪಕ್ಷಗಳ ಒತ್ತಡ
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಕಟು ಟೀಕೆಗಳ ನಂತರ ಕೇಂದ್ರ ಸರ್ಕಾರವು ಈ ಕ್ರಮಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಇರಾನ್ ವಿಷಯದಲ್ಲಿ ಪ್ರಧಾನಮಂತ್ರಿಯವರು ಮೌನ ಮುರಿಯಬೇಕು. ಸರ್ಕಾರದ ಇಂತಹ ನಿಲುವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನವನ್ನು ಕುಗ್ಗಿಸುತ್ತಿದೆ. ಇರಾನ್‌ನೊಂದಿಗೆ ಆಪ್ತ ಸಂಬಂಧ ಹೊಂದಿರುವ ಭಾರತವು ಈ ವಿಷಯದಲ್ಲಿ ಸ್ಪಷ್ಟ ನಿಲುವು ತಳೆಯಬೇಕು” ಎಂದು ರಾಹುಲ್ ಗಾಂಧಿ ಈ ಹಿಂದೆ ಒತ್ತಾಯಿಸಿದ್ದರು.
ದಾಳಿಯ ಹಿನ್ನೆಲೆ
ಕಳೆದ ಫೆಬ್ರವರಿ 28ರ ಶನಿವಾರದಂದು ಯುಎಸ್ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮಾನೈ ಮೃತಪಟ್ಟಿದ್ದರು. ಈ ಭೀಕರ ದಾಳಿಯಲ್ಲಿ ಖಮಾನೈ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಕ್ಕಳು ಸಹ ಮೃತಪಟ್ಟಿದ್ದರು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಅವರ ಪತ್ನಿ ಮನ್ಸೂರಾ ಹಜಸ್ತಾ ಅವರು ಮಾರ್ಚ್ 2ರ ಸೋಮವಾರದಂದು ನಿಧನರಾಗಿದ್ದಾರೆ.
ಈ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಆಕ್ರಮಣಕಾರಿ ಹೆಜ್ಜೆ ಇಟ್ಟಿದ್ದು, ಗಲ್ಫ್ ರಾಷ್ಟ್ರಗಳಲ್ಲಿರುವ ಯುಎಸ್ ಮಿಲಿಟರಿ ನೆಲೆಗಳು ಮತ್ತು ರಾಯಭಾರ ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದೆ. ಇದರಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ