ಕುವೈತ್ ಸಿಟಿ: ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುವೈತ್‌ನಾದ್ಯಂತ ಎಲ್ಲಾ ಮಸೀದಿಗಳಲ್ಲಿ ತರಾವೀಹ್ ಮತ್ತು ಖಿಯಾಮ್ ನಮಾಜ್‌ಗಳನ್ನು ನಿಗದಿತ ಸಮಯದೊಳಗೆ ಪೂರೈಸಬೇಕು ಎಂದು ಔಕಾಫ್ ಸಚಿವಾಲಯ ತಿಳಿಸಿದೆ.
ನಮಾಜ್ ಸಮಯದ ಕುರಿತು ಪ್ರಮುಖ ಸೂಚನೆಗಳು:
ವಿಶ್ವಾಸಿಗಳ ಸುರಕ್ಷತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಸಚಿವಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:
- ತರಾವೀಹ್ ನಮಾಜ್: ಇಂದು ರಾತ್ರಿಯಿಂದಲೇ ತರಾವೀಹ್ ನಮಾಜ್ ಆರಂಭವಾಗಲಿದ್ದು, ಇಶಾ ನಮಾಜ್ ನಂತರದ ಈ ಪ್ರಾರ್ಥನೆಯು 20 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ.
- ಖಿಯಾಮ್ ನಮಾಜ್: ಮಧ್ಯರಾತ್ರಿ 12 ಗಂಟೆಗೆ ಆರಂಭವಾಗಿ 12:30ಕ್ಕೆ ಮುಕ್ತಾಯಗೊಳ್ಳಬೇಕು.
ಪ್ರಾಂತೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುವೈತ್‌ನಲ್ಲಿ ತರಾವೀಹ್ ನಮಾಜ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಮುಂದಿನ ಆದೇಶದವರೆಗೆ ಈ ಕ್ರಮ ಜಾರಿಯಲ್ಲಿರುತ್ತದೆ ಎಂದು ಈ ಹಿಂದೆ ಔಖಾಫ್ ಸಚಿವಾಲಯ ತಿಳಿಸಿತ್ತು. ಇದೀಗ ಕಟ್ಟುನಿಟ್ಟಿನ ಸೂಚನೆಗಳೊಂದಿಗೆ ಪ್ರಾರ್ಥನೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೋರಲಾಗಿದೆ.
ಕುವೈತ್ ವಿರುದ್ಧ ಅವಹೇಳನಕಾರಿ ವೀಡಿಯೊ: ಮೂವರ ಬಂಧನ
ಏತನ್ಮಧ್ಯೆ, ಕುವೈತ್ ದೇಶವನ್ನು ವ್ಯಂಗ್ಯ ಮಾಡುವ ಮತ್ತು ಅವಹೇಳನ ಮಾಡುವ ರೀತಿಯಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.
ಇಂತಹ ಕಾನೂನು ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವಾಲಯ ಎಚ್ಚರಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ರಾಷ್ಟ್ರೀಯ ಜವಾಬ್ದಾರಿಯನ್ನು ಅರಿತು ವರ್ತಿಸಬೇಕು ಎಂದು ಸಚಿವಾಲಯ ಮನವಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ