ರಿಯಾದ್ (ಸೌದಿ ಅರೇಬಿಯಾ): ಅನಿವಾಸಿ ಕನ್ನಡಿಗರು ವಿದೇಶಿ ನೆಲದಲ್ಲೂ ಕನ್ನಡ ಭಾಷೆಯ ಕಂಪನ್ನು ಪಸರಿಸುತ್ತಿದ್ದಾರೆ ಎಂಬುದಕ್ಕೆ ರಿಯಾದ್‌ನ ಅಲಿಫ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳ ಸಾಧನೆಯೇ ಸಾಕ್ಷಿ. ಶಾಲೆಯು ಹಮ್ಮಿಕೊಂಡಿದ್ದ ‘ಬುಕ್ ಬ್ಲೂಮ್ 500’ (Book Bloom 500) ಅಭಿಯಾನದ ಭಾಗವಾಗಿ 6ನೇ ತರಗತಿಯ ವಿದ್ಯಾರ್ಥಿನಿಯರಾದ ಫಾತಿಮತ್ ಆಫಿಯಾ ಮತ್ತು ಐಷತ್ ಅಜೀಫಾ ಕನ್ನಡದಲ್ಲಿ ಪುಸ್ತಕಗಳನ್ನು ರಚಿಸುವ ಮೂಲಕ ಸೃಜನಶೀಲ ಬರವಣಿಗೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಕಳೆದ ಜನವರಿ 23 ಶುಕ್ರವಾರ ಸಂಜೆ ರಿಯಾದಿನ ಶಿಫಾ’ದ ಖಸ್ರ್ ಅಲ್ ಅಮೀರಿ ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಶಾಲೆಯ ಒಟ್ಟು 1200 ವಿದ್ಯಾರ್ಥಿಗಳ ಪೈಕಿ 500 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಈ ಬೃಹತ್ ಸೃಜನಶೀಲ ಬರವಣಿಗೆಯ ಸ್ಪರ್ಧೆಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ಬೃಹತ್ ಬರವಣಿಗೆಯ ಪಾಠವು (Largest Creative Writing Lesson) ಈಗ ಅಧಿಕೃತವಾಗಿ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಈ ಮೂಲಕ ಅಲಿಫ್ ಇಂಟರ್ನ್ಯಾಷನಲ್ ಸ್ಕೂಲ್ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ಮುಡಿಗೇರಿಸಿಕೊಂಡು ಇತಿಹಾಸ ಸೃಷ್ಟಿಸಿದೆ. “ನಮ್ಮ ವಿದ್ಯಾರ್ಥಿಗಳು ವಿದೇಶದಲ್ಲೂ ಕನ್ನಡದಲ್ಲಿ ಪುಸ್ತಕ ಬರೆದು ಸಮುದಾಯವು ಹೆಮ್ಮೆಪಡುವಂತಹ ಸಾಧನೆ ಮಾಡಿದ್ದಾರೆ,” ಎಂದು ಅವರ ತರಗತಿ ಶಿಕ್ಷಕಿ ಶ್ರೀಮತಿ ಸುಂದುಸ್ ಸಬೀರ್ ಚೌಧರಿ ಪ್ರಶಂಸಿಸಿದ್ದಾರೆ.
ಈ ಸಾಧಕ ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕಲಂಜಿಬೈಲ್ ನಿವಾಸಿ, ಅಲಿಫ್ ಶಾಲೆಯ ಸಾರಿಗೆ ಮೇಲ್ವಿಚಾರಕರಾದ ಶ್ರೀ ಯೂಸುಫ್ ಉಸ್ಮಾನ್ ಕೆ.ವಿ. ಮತ್ತು ಶ್ರೀಮತಿ ರೈಹಾನಾ ದಂಪತಿಗಳ ಪುತ್ರಿಯರು. ಯೂಸುಫ್ ಉಸ್ಮಾನ್ ಅವರು ಕಳೆದ 34 ವರ್ಷಗಳಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, 16 ವರ್ಷಗಳಿಂದ ಅಲಿಫ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಲಿಫ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕ್ಯಾಲಿಕಟ್‌ನ ನಾಲೆಡ್ಜ್ ಸಿಟಿಯ ಆರಂಭಿಕ ಹೂಡಿಕೆದಾರರಲ್ಲಿ ಇವರು ಪ್ರಮುಖರು.
ಈ ಕುಟುಂಬವು ವಿದೇಶದಲ್ಲೂ ಕನ್ನಡ ಭಾಷೆಯ ಉಳಿವಿಗೆ ಶ್ರಮಿಸುತ್ತಿದೆ. ಯೂಸುಫ್ ಉಸ್ಮಾನ್ ಅವರ ಪುತ್ರಿಯರಾದ ಶ್ರೀ ಅಶ್ರಿಫಾ ಬಾನು ಮತ್ತು ಕೆ.ವಿ. ಆಶಿಕಾ ಬಾನು ಅವರು ಕೂಡ ಇದೇ ಶಾಲೆಯಲ್ಲಿ ಕನ್ನಡ ಶಿಕ್ಷಕಿಯರಾಗಿ ಕಾರ್ಯನಿರ್ವಹಿಸುತ್ತಿದ್ದು, ತಂಗಿಯರ ಈ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ.
ಸೌದಿ ಅರೇಬಿಯಾದಲ್ಲಿ ಕನ್ನಡದ ಬಾವುಟ ಹಾರಿಸಿದ ಈ ಪುಟ್ಟ ಪ್ರತಿಭೆಗಳ ಸಾಧನೆಯು ಕನ್ನಡಿಗರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂದ ದೊಡ್ಡ ಗೌರವವಾಗಿದೆ.


















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)