ಮಸ್ಕತ್: ಒಮಾನ್ನ ಸುಹಾರ್ನಲ್ಲಿ ನಡೆದ ಭೀಕರ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಭದ್ರತಾ ಮೂಲಗಳು ಖಚಿತಪಡಿಸಿವೆ. ಶುಕ್ರವಾರ ಬೆಳಿಗ್ಗೆ ಸುಹಾರ್ ಸನಾಯಾ ಪ್ರದೇಶದಲ್ಲಿ ಎರಡು ಪ್ರತ್ಯೇಕ ಡ್ರೋನ್ ದಾಳಿಗಳು ಸಂಭವಿಸಿವೆ.
ಅಲ್ ಅವ್ಹಿ ಕೈಗಾರಿಕಾ ವಲಯದಲ್ಲಿರುವ ಲೇಬರ್ ಕ್ಯಾಂಪ್ (ಕಾರ್ಮಿಕರ ವಸತಿ ನಿಲಯ) ಸಮೀಪ ಮೊದಲ ಡ್ರೋನ್ ದಾಳಿ ನಡೆದಿದೆ. ಈ ಸ್ಫೋಟದ ತೀವ್ರತೆಗೆ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹನ್ನೊಂದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರಲ್ಲಿ ಹತ್ತು ಮಂದಿ ಭಾರತೀಯರು ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡನೇ ಡ್ರೋನ್ ದಾಳಿಯು ಜನರಿಲ್ಲದ ಬಯಲು ಪ್ರದೇಶದಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಉನ್ನತ ಮಟ್ಟದ ತನಿಖೆಯನ್ನು ಆರಂಭಿಸಿವೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳು, ಫೋಟೋಗಳು ಅಥವಾ ಯಾವುದೇ ರೀತಿಯ ವದಂತಿಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
“ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸಬೇಕು. ಒಮಾನ್ ಸುಲ್ತಾನೇಟ್ನಲ್ಲಿರುವ ನಾಗರಿಕರು ಮತ್ತು ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ,” ಎಂದು ಮೂಲಗಳು ತಿಳಿಸಿವೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ