ನ್ಯೂಯಾರ್ಕ್: ಇಸ್ರೇಲ್ ಮತ್ತು ಅಮೆರಿಕ ಜಂಟಿ ಮಿಲಿಟರಿ ಕಾರ್ಯಾಚರಣೆಗಳನ್ನು ನಡೆಸುತ್ತಿರುವ ಬೆನ್ನಲ್ಲೇ, ಇರಾನ್ನ ಪರಮೋನ್ನತ ನಾಯಕ ಮುಜ್ತಬಾ ಖಾಮ್ನಇ ಅವರ ಬಗ್ಗೆ ಮಾಹಿತಿ ನೀಡುವವರಿಗೆ ಅಮೆರಿಕ ಬಹುಮಾನ ಘೋಷಿಸಿದೆ. ಮಾಹಿತಿದಾರರಿಗೆ 10 ಮಿಲಿಯನ್ ಡಾಲರ್ (ಅಂದಾಜು 92.47 ಕೋಟಿ ರೂಪಾಯಿ) ನೀಡುವುದಾಗಿ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ತಿಳಿಸಿದೆ. ‘ರಿವಾರ್ಡ್ಸ್ ಫಾರ್ ಜಸ್ಟಿಸ್’ ಕಾರ್ಯಕ್ರಮದ ಅಡಿಯಲ್ಲಿ ಈ ಘೋಷಣೆ ಮಾಡಲಾಗಿದೆ.
ಮುಜ್ತಬಾ ಖಾಮ್ನಇ ಮಾತ್ರವಲ್ಲದೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಅಧಿಕಾರಿಗಳು ಮತ್ತು ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಅವರ ವಿರುದ್ಧವೂ ಬಹುಮಾನ ಘೋಷಿಸಲಾಗಿದೆ. ವಿಶ್ವದಾದ್ಯಂತ ಭಯೋತ್ಪಾದನಾ ಚಟುವಟಿಕೆಗಳನ್ನು ಯೋಜಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಇವರು ಭಾಗಿಯಾಗಿದ್ದಾರೆ ಎಂದು ಅಮೆರಿಕ ಆರೋಪಿಸಿದೆ.
- ಫೆಬ್ರವರಿ 28 ರಂದು ಇರಾನ್ನ ಮಾಜಿ ಪರಮೋನ್ನತ ನಾಯಕ ಅಲಿ ಖಮೇನಿ ಅವರ ಹತ್ಯೆಯ ನಂತರ ಈ ಪ್ರದೇಶದಲ್ಲಿ ಸಂಘರ್ಷ ತೀವ್ರಗೊಂಡಿದೆ.
- ಮುಂಬರುವ ದಿನಗಳಲ್ಲಿ ಇರಾನ್ ಮೇಲೆ ಬಲವಾದ ದಾಳಿಗಳು ಮುಂದುವರಿಯಲಿವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ