ದೋಹಾ: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಖತ್ತರ್ ಭಾಗಿಯಾಗಿಲ್ಲ ಮತ್ತು ತನ್ನ ದೇಶದ ರಕ್ಷಣೆಯತ್ತ ಮಾತ್ರ ಗಮನ ಹರಿಸುತ್ತಿರುವುದಾಗಿ ವಿದೇಶಾಂಗ ವಕ್ತಾರ ಡಾ. ಮಾಜಿದ್ ಅಲ್ ಅನ್ಸಾರಿ ತಿಳಿಸಿದ್ದಾರೆ. ಸಂಘರ್ಷದಲ್ಲಿರುವ ದೇಶಗಳು ಆದಷ್ಟು ಬೇಗ ಮಾತುಕತೆ ಆರಂಭಿಸುವುದು ಉದ್ವಿಗ್ನತೆಯನ್ನು ಕೊನೆಗಾಣಿಸಲು ಇರುವ ಅತ್ಯಂತ ಸೂಕ್ತ ಮಾರ್ಗವಾಗಿದೆ.
ರಾಜತಾಂತ್ರಿಕತೆಯೇ ಸಂಘರ್ಷಗಳನ್ನು ಕೊನೆಗಾಣಿಸಲು ಇರುವ ಏಕೈಕ ದಾರಿ ಎಂದು ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರಿಸಿದರು. ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವುದನ್ನು ಖತ್ತರ್ ಸ್ವಾಗತಿಸುತ್ತದೆ, ಆದರೆ ಪ್ರಸ್ತುತ ಅಂತಹ ಯಾವುದೇ ಪ್ರಕ್ರಿಯೆಯಲ್ಲಿ ಖತ್ತರ್ ಪಾಲುದಾರನಲ್ಲ. ಆದಾಗ್ಯೂ, ಸಂಧಾನ ಮಾತುಕತೆ ಮತ್ತು ಸಹಾಯಕ್ಕಾಗಿ ಖತ್ತರ್ ಸದಾ ಸಿದ್ಧವಿದೆ ಎಂದು ಅವರು ತಿಳಿಸಿದರು.
ಖತ್ತರ್ ಮೇಲೆ ನಡೆದ ದಾಳಿಗಳಲ್ಲಿ ಶೇ. 90ಕ್ಕಿಂತ ಹೆಚ್ಚಿನವುಗಳನ್ನು ಯಶಸ್ವಿಯಾಗಿ ವೈಫಲ್ಯಗೊಳಿಸಲಾಗಿದೆ ಎಂದು ಅವರು ವಿವರಿಸಿದರು.
ಅಂತರಾಷ್ಟ್ರೀಯ ಕಾನೂನುಗಳಿಗೆ ಅನುಗುಣವಾಗಿ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಖತ್ತರ್‌ಗೆ ಇದೆ. ಆದರೆ, ಪ್ರತಿದಾಳಿ ನಡೆಸುವ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಂಘರ್ಷವನ್ನು ಹೆಚ್ಚಿಸುವುದಕ್ಕಿಂತ ಪ್ರಾದೇಶಿಕ ಶಾಂತಿಗಾಗಿ ಕೆಲಸ ಮಾಡಲು ಖತ್ತರ್ ಬಯಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಗಲ್ಫ್ ವಲಯದ ಭದ್ರತಾ ವ್ಯವಸ್ಥೆಯು ಪ್ರಸ್ತುತ ಹದಗೆಟ್ಟಿದೆ. ಈ ಭಾಗದಲ್ಲಿ ಶಾಂತಿ ನೆಲೆಸಲು ಇರಾನ್ ಜೊತೆಗಿನ ಸಹಬಾಳ್ವೆ ಅತ್ಯಗತ್ಯ ಎಂದು ಖತ್ತರ್ ವಕ್ತಾರರು ಹೇಳಿದರು. ಗಲ್ಫ್ ರಾಷ್ಟ್ರಗಳು ಮತ್ತು ಇರಾನ್ ನಡುವಿನ ಭವಿಷ್ಯದ ಸಂಬಂಧದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಲಯದ ಎಲ್ಲಾ ಜನರ ನಡುವೆ ಆಳವಾದ ಸಂಬಂಧವಿದ್ದು, ದೇಶಗಳು ಪರಸ್ಪರ ಒಪ್ಪಂದಕ್ಕೆ ಬರಲು ದಾರಿಯನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.
“ನಾವು ಪರಸ್ಪರ ನೆರೆಹೊರೆಯವರಾಗಿದ್ದು, ಒಟ್ಟಾಗಿ ಸಾಗಲು ದಾರಿಗಳನ್ನು ಕಂಡುಕೊಳ್ಳಬೇಕು. ಆದರೆ ನಂಬಿಕೆಯನ್ನು ಮರಳಿ ಗಳಿಸುವುದು ಇರಾನ್‌ನ ಜವಾಬ್ದಾರಿಯಾಗಿದೆ” ಎಂದು ಮಾಜಿದ್ ಅಲ್ ಅನ್ಸಾರಿ ವಿವರಿಸಿದರು.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?