ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ಬಳಿಯ ಮೇಲ್ಸೇತುವೆಯ ಮೇಲೆ ಇಂದು ಬೆಳ್ಳಂಬೆಳಗ್ಗೆ ಭೀಕರ ಕೊಲೆಯೊಂದು ನಡೆದಿದೆ. ಅಜ್ಜಿನಡ್ಕ ಮುಳ್ಳುಗುಡ್ಡೆ ನಿವಾಸಿ, ಆರಿಫ್ ಯಾನೆ ಟಾಬ್ಲೆಟ್ ಆರಿಫ್ (45) ಎಂಬವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಮೃತ ಆರಿಫ್ ಮಂಗಳೂರಿನ ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ಪ್ರತಿದಿನದಂತೆ ಇಂದು ಮುಂಜಾನೆ ಸುಮಾರು 5:00 ಗಂಟೆಯ ಸುಮಾರಿಗೆ ತಮ್ಮ ಮನೆಯಿಂದ ಬೈಕ್ನಲ್ಲಿ ಮೀನುಗಾರಿಕಾ ಬಂದರಿನತ್ತ ತೆರಳುತ್ತಿದ್ದರು. ಅವರು ತೊಕ್ಕೊಟ್ಟು ಫ್ಲೈಓವರ್ ತಲುಪುತ್ತಿದ್ದಂತೆ, ಕಾರಿನಲ್ಲಿ ಅಟ್ಟಿಸಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಅವರ ಬೈಕ್ ಅನ್ನು ಅಡ್ಡಗಟ್ಟಿದೆ.
ಬೈಕ್ನಿಂದ ಕೆಳಕ್ಕೆ ಬೀಳಿಸಿ, ತಲೆ ಮತ್ತು ದೇಹದ ಭಾಗಕ್ಕೆ ಮಾರಕಾಸ್ತ್ರಗಳಿಂದ ಮನಬಂದಂತೆ ದಾಳಿ ನಡೆಸಲಾಗಿದೆ. ತೀವ್ರ ರಕ್ತಸ್ರಾವಕ್ಕೊಳಗಾದ ಆರಿಫ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅದೇ ಕಾರಿನಲ್ಲಿ ಪರಾರಿಯಾಗಿದ್ದಾರೆ.
ಕುಟುಂಬದ ಹಿನ್ನೆಲೆ:
ಮೂಲತಃ ಮಂಗಳೂರಿನ ಕುದ್ರೋಳಿ ನಿವಾಸಿಯಾಗಿದ್ದ ಆರಿಫ್, ಕಳೆದ ಆರೇಳು ವರ್ಷಗಳಿಂದ ಕುಟುಂಬ ಸಮೇತ ತಲಪಾಡಿ, ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮತ್ತು ಓರ್ವ ಹೆಣ್ಣು ಮಗು ಸೇರಿ ಒಟ್ಟು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಪೊಲೀಸ್ ತನಿಖೆ ಮತ್ತು ಭೇಟಿ:
ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಕುಮಾರ್ ಹಾಗೂ ಸೋಕೋ (SOCO) ವಿಧಿವಿಜ್ಞಾನ ತಂಡ ಭೇಟಿ ನೀಡಿ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಕೊಲೆಯಾದ ಆರಿಫ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಅವರನ್ನು ರೌಡಿಶೀಟರ್ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ಕೊಲೆಯು ಹಳೆ ದ್ವೇಷದ ಹಿನ್ನೆಲೆಯಲ್ಲಿ ನಡೆದ ಸಂಚು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸದ್ಯಕ್ಕೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















ಇನ್ನಷ್ಟು ಸುದ್ದಿಗಳು
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
ಮುಂದಿನ 6 ತಿಂಗಳುಗಳು ಅತ್ಯಂತ ಕಠಿಣ, ಹಲವರಿಗೆ ಉದ್ಯೋಗ ನಷ್ಟ- ಟೆಕ್ಸ್ಟೈಲ್ ಸಂಸ್ಥಾಪಕನ ‘ಎಕ್ಸ್’ ಪೋಸ್ಟ್ ವೈರಲ್
ದುಲ್ ಹಜ್ಜ್ ಚಂದ್ರ ದರ್ಶನ : ಗಲ್ಫ್ ರಾಷ್ಟ್ರಗಳಲ್ಲಿ ಮೇ.27 ರಂದು ಈದುಲ್ ಅದ್’ಹಾ
ದುಲ್ ಹಿಜ್ಜಾ ಚಂದ್ರದರ್ಶನವಾಗಿಲ್ಲ: ಮೇ 28 ರಂದು ಬಕ್ರೀದ್- ಖಾಝಿಗಳಿಂದ ಘೋಷಣೆ
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಭೀಕರ ಅಗ್ನಿ ಅವಘಡ- ಅದೃಷ್ಟವಶಾತ್ ಪ್ರಯಾಣಿಕರು ಪಾರು..!
ಮೇ.17,ಎಸ್.ವೈ.ಎಸ್ ದಕ ವೆಸ್ಟ್ ಜಿಲ್ಲಾ ವಾರ್ಷಿಕ ಕೌನ್ಸಿಲ್
ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಪಿನ ಮೇಲಿದ್ದ ನಿರ್ಬಂಧ ತೆರವು: ಸರ್ಕಾರದ ನಿರ್ಧಾರ ಸ್ವಾಗತಾರ್ಹ – ಎಸ್ಸೆಸ್ಸೆಫ್
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ನ್ಯಾಯಕ್ಕಾಗಿ ಬೀದಿಗಿಳಿಯಲು ಎಸ್ಸೆಸ್ಸೆಫ್ ದ.ಕ ಈಸ್ಟ್ ಕ್ಯಾಂಪಸ್ ಚೇಂಬರ್ ಕರೆ
ಕೇರಳದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್- ಸೋಮವಾರ ಪ್ರಮಾಣವಚನ
ಹಿಜಾಬ್ ನಿರ್ಬಂಧ ರದ್ದು- ಕಾಂತಪುರಂ ಉಸ್ತಾದರ ಮಧ್ಯಸ್ಥಿಕೆಗೆ ಸಿಕ್ಕ ಐತಿಹಾಸಿಕ ಯಶಸ್ಸು