ದುಬೈ: ಸ್ನೇಹಿತರ ನಡುವಿನ ಗಲಾಟೆಯನ್ನು ಶಾಂತಗೊಳಿಸಲು ಹೋದ ಮಲಯಾಳಿ ಯುವಕನೋರ್ವ ದುಬೈನಲ್ಲಿ ಚೂರಿ ಇರಿತಕ್ಕೆ ಬಲಿಯಾಗಿರುವ ದಾರುಣ ಘಟನೆ ವರದಿಯಾಗಿದೆ.
ಕೋಝಿಕ್ಕೋಡ್ ಜಿಲ್ಲೆಯ ಚೆರುವಣ್ಣೂರು ಮಧುರ ಬಜಾರ್ ನಿವಾಸಿ, ನಜಾತ್ ಮಂಜಿಲ್ನ ಜಸೀಲ್ (32) ಮೃತಪಟ್ಟ ದುರ್ದೈವಿ. ಕಳೆದ ಮೂರು ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದ ಇವರು, ತಾವು ವಾಸವಿದ್ದ ರೂಮಿನಲ್ಲಿ ಇಬ್ಬರು ಸ್ನೇಹಿತರ ನಡುವೆ ನಡೆಯುತ್ತಿದ್ದ ತೀವ್ರ ವಾಕ್ಸಮರವನ್ನು ತಡೆಯಲು ಮಧ್ಯಪ್ರವೇಶಿಸಿದ್ದರು. ಈ ಸಂದರ್ಭದಲ್ಲಿ ಸ್ನೇಹಿತನೊಬ್ಬ ಚೂರಿಯಿಂದ ಇರಿದಿದ್ದರಿಂದ ಜಸೀಲ್ ಅವರ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು.
ವಿಷಯ ತಿಳಿದ ಕೂಡಲೇ ದುಬೈ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಸೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ, ಅತಿಯಾದ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ದುಬೈನ ಅಲ್ ರಾಶಿದಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ