ಪುತ್ತೂರು: ಎಸ್.ವೈ.ಎಸ್ (SYS) ರಾಜ್ಯ ಸಮಿತಿಯ ವತಿಯಿಂದ ಆಯೋಜಿಸಲಾದ ‘ಮಾದರಿ ಮದುವೆ’ ಜನ ಜಾಗೃತಿ ಆಂದೋಲನದ ಮಹತ್ವಪೂರ್ಣ ಸಮಾರೋಪ ಸಮಾರಂಭವು ಮೇ 2 ರಂದು ಶನಿವಾರ ಸಂಜೆ 4:00 ಗಂಟೆಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಎ.ಪಿ. ಉಸ್ತಾದ್) ರವರ ಘನ ಸಾನಿಧ್ಯದಲ್ಲಿ ಈ ಸಮಾರಂಭವು ಜರುಗಲಿದೆ.
ಈ ಐತಿಹಾಸಿಕ ಸಮಾರೋಪ ಸಮಾರಂಭದ ವ್ಯಾಪಕ ಪ್ರಚಾರಾರ್ಥವಾಗಿ ಎಸ್.ವೈ.ಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯು ಜಿಲ್ಲಾದ್ಯಂತ ಬೃಹತ್ ‘ವಾಹನ ಸಂದೇಶ ಜಾಥಾ’ವನ್ನು ಹಮ್ಮಿಕೊಂಡಿದೆ.
25 ಕೇಂದ್ರಗಳಲ್ಲಿ ಸಂಚರಿಸಲಿರುವ ಜಾಥಾ:
ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯ ರವರ ನೇತೃತ್ವದಲ್ಲಿ ಈ ವಾಹನ ಜಾಥಾವು ನಡೆಯಲಿದೆ. ಎಪ್ರಿಲ್ 28 ಮಂಗಳವಾರ ಮತ್ತು ಎಪ್ರಿಲ್ 29 ಬುಧವಾರದಂದು ಎರಡು ದಿನಗಳ ಕಾಲ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಪ್ರಮುಖ 25 ಕೇಂದ್ರಗಳಲ್ಲಿ ಜಾಥಾವು ಸಂಚರಿಸಿ, ಸಮಾರೋಪ ಸಮಾರಂಭದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ.
ಆಂದೋಲನದ ಯಶಸ್ಸಿಗೆ ಮತ್ತು ಸಮಾರೋಪ ಸಮಾರಂಭದ ಪೂರ್ವಭಾವಿ ಪ್ರಚಾರಕ್ಕಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ