ರಿಯಾದ್: ಹಜ್ ನಿಯಮಗಳನ್ನು ಉಲ್ಲಂಘಿಸಿ ಮಕ್ಕಾದಲ್ಲಿ ಉಳಿದುಕೊಂಡಿದ್ದ ನೂರಾರು ವಿದೇಶಿಯರನ್ನು ಬಂಧಿಸಲಾಗಿದೆ. ಏಪ್ರಿಲ್ 18ರಿಂದ ಸಂದರ್ಶಕ ವೀಸಾದಲ್ಲಿರುವವರು ಮಕ್ಕಾದಲ್ಲಿ ತಂಗಬಾರದು ಎಂದು ಸೌದಿ ಆಂತರಿಕ ಸಚಿವಾಲಯ ತಿಳಿಸಿತ್ತು. ಇದೀಗ ವಸತಿ ಸಂಕೀರ್ಣಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಭಾರಿ ದಂಡ ಮತ್ತು ಗಡಿಪಾರು ಶಿಕ್ಷೆ ವಿಧಿಸಲಾಗುತ್ತದೆ.
ಹಜ್ ಹಿನ್ನೆಲೆಯಲ್ಲಿ ಸೌದಿಯ ವಿವಿಧ ಭಾಗಗಳಿಂದ ಬಂದಿರುವ ವಿಶೇಷ ಭದ್ರತಾ ಪಡೆಗಳು ಮನೆಗಳು ಮತ್ತು ರಸ್ತೆಗಳಲ್ಲಿ ಹಾಗೂ ಚೆಕ್ ಪೋಸ್ಟ್ ಮೂಲಕ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿವೆ. ಮಕ್ಕಾದಲ್ಲಿ ಉಳಿಯಲು ಹಜ್ ಪರ್ಮಿಟ್, ಮಕ್ಕಾ ಇಖಾಮಾ ಅಥವಾ ಕೆಲಸದ ಅನುಮತಿ ಪತ್ರ ಕಡ್ಡಾಯವಾಗಿದೆ.
ಅನಧಿಕೃತವಾಗಿ ಮಕ್ಕಾದಲ್ಲಿ ಉಳಿಯಲು ಸಹಾಯ ಮಾಡುವವರಿಗೆ 1 ಲಕ್ಷ ರಿಯಾಲ್ ದಂಡ ವಿಧಿಸಲಾಗುವುದು. ಹಾಗೆಯೇ, ಪರ್ಮಿಟ್ ಇಲ್ಲದವರನ್ನು ವಾಹನದಲ್ಲಿ ಕರೆದೊಯ್ದರೆ ವಾಹನ ಮಾಲೀಕರಿಗೆ 1 ಲಕ್ಷ ರಿಯಾಲ್ ವರೆಗೆ ದಂಡ ಮತ್ತು ವಾಹನ ಮುಟ್ಟುಗೋಲು ಹಾಕಿಕೊಳ್ಳುವಂತಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ