ಪುತ್ತೂರು: ಮದುವೆ ಸಮಾರಂಭಗಳಲ್ಲಿ ಕಂಡುಬರುತ್ತಿರುವ ಆಧಾರ್ಮಿಕ ಆಚರಣೆಗಳು ಮತ್ತು ದುಂದುವೆಚ್ಚಗಳ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುನ್ನೀ ಯುವಜನ ಸಂಘ (ಎಸ್ವೈಎಸ್) ಹಮ್ಮಿಕೊಂಡಿರುವ ‘ಮಾದರಿ ಮದುವೆ ಅಭಿಯಾನ’ ಹಾಗೂ ‘ಜನಜಾಗೃತಿ ಜಾಥಾ’ ದ ಸಮಾರೋಪ ಸಮ್ಮೇಳನವು ಮೇ 2ರಂದು (ನಾಳೆ) ಪುತ್ತೂರಿನಲ್ಲಿ ನಡೆಯಲಿದೆ.
ಈ ಅಭಿಯಾನದ ಅಂಗವಾಗಿ ಕಳೆದ ಕೆಲವು ಸಮಯದಿಂದ ಸಮಾಜದ ವಿವಿಧ ಸ್ತರಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. “ಮದುವೆ ಎಂಬ ಪವಿತ್ರ ಕಾರ್ಯವು ಇಂದು ಧರ್ಮಬಾಹಿರ ಕಾರ್ಯಗಳು ಮತ್ತು ದುಂದುವೆಚ್ಚಗಳಿಂದಾಗಿ ತನ್ನ ಪಾವಿತ್ರ್ಯವನ್ನು ಕಳೆದುಕೊಳ್ಳುತ್ತಿದೆ. ಇದು ಆರ್ಥಿಕವಾಗಿ ಅತ್ಯಂತ ಭಾರವಾಗಿ ಮಾರ್ಪಟ್ಟಿದ್ದು, ಸಮಾಜದಲ್ಲಿ ಅನೇಕರು ಸಾಲದ ಅಡಕತ್ತರಿಯಲ್ಲಿ ಸಿಲುಕುವಂತಾಗಿದೆ ಅಥವಾ ಮದುವೆಯಾಗುವುದಕ್ಕೇ ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ”. ಜಮಾಅತ್ ನಾಯಕರು, ಧರ್ಮ ಗುರುಗಳು, ಯುವಕ-ಯುವತಿಯರು, ಹೆತ್ತವರು ಮತ್ತು ಪೋಷಕರು ಒಳಗೊಂಡು ಮದುವೆಯ ಪಾವಿತ್ರ್ಯತೆ ಹಾಗೂ ಸರಳತೆಯ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗಿದೆ ಎಂದು ಸಂಘಟಕರು ವಿವರಿಸಿದ್ದಾರೆ.
ಕಾರ್ಯಕ್ರಮದ ವಿವರ:
ಕಾಲ್ನಡಿಗೆ ಜಾಥಾ: ಮೇ 2ರಂದು ಸಂಜೆ 4 ಗಂಟೆಗೆ ಪುತ್ತೂರಿನ ದರ್ಬೆಯಿಂದ ಕಿಲ್ಲೆ ಮೈದಾನದವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದೆ.
ಸಮಾರೋಪ ಸಮ್ಮೇಳನ: ಸಂಜೆ 5:30ಕ್ಕೆ ಕಿಲ್ಲೆ ಮೈದಾನದ ‘ಖುರ್ರತುಸ್ಸಾದಾತ್ ವೇದಿಕೆ’ಯಲ್ಲಿ ಅಭಿಯಾನದ ಸಮಾರೋಪ ಸಮ್ಮೇಳನ ಜರುಗಲಿದೆ.
ಮದುವೆಗಳಲ್ಲಿ ಇಸ್ಲಾಂ ಧರ್ಮದ ಆಶಯಕ್ಕೆ ವಿರುದ್ಧವಾದ ಅದ್ದೂರಿತನವನ್ನು ಕೈಬಿಟ್ಟು, ಸರಳ ಮತ್ತು ಮಾದರಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಪ್ರಮುಖ ಧಾರ್ಮಿಕ ನಾಯಕರು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಸುನ್ನೀ ಜಂಇಯತುಲ್ ಉಲಮಾ ಕರ್ನಾಟಕ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಸ್ತ ಉಲಮಾ ಒಕ್ಕೂಟದ ಕಾರ್ಯದರ್ಶಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಡಾ. ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ