ಮಂಗಳೂರು : ಎಸ್‌ವೈಎಸ್ ರಾಜ್ಯ ಸಮಿತಿಯು ಆಯೋಜಿಸಿದ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮ್ಮೇಳನವು ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಹೃದಯ ಭಾಗವಾದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ 2026 ಮೇ 2 ಶನಿವಾರದಂದು ಸಂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಆಗಮಿಸಲಿದ್ದು, ಝೈನುಲ್ ಉಲಮಾ ಮಾಣಿ ಉಸ್ತಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶೈಖುನಾ ಪೇರೋಡ್ ಉಸ್ತಾದರು ಮುಖ್ಯ ಪ್ರಭಾಷಣಗೈಯಲಿದ್ದು, ಹಲವಾರು ಸಾದಾತುಗಳು, ಉಲಮಾ – ಉಮರಾ ನೇತಾರರು, ಸುನ್ನಿ ಸಂಘ ಕುಟುಂಬದ ನಾಯಕರು, ಚಿಂತಕರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಅಂದು ಅಪರಾಹ್ನ 3 ಕ್ಕೆ ಬೃಹತ್ ಕಾಲ್ನಡಿಗೆ ಜಾಗೃತಿ ಜಾಥಾವು ದರ್ಬೆಯಿಂದ ಆರಂಭಗೊಂಡು ಪುತ್ತೂರು ರಾಜ ಬೀದಿಯಲ್ಲಿ ಹಾದು ಸಮ್ಮೇಳನ ನಗರಿ ತಲುಪಲಿದೆ. ಜಿಲ್ಲೆಯ ಪ್ರತಿಷ್ಟಿತ ದಫ್, ಸ್ಕೌಟ್ ಹಾಗೂ ಎಸ್‌ವೈಎಸ್ ಇಸಾಬಾ ತಂಡವು ಭಾಗವಹಿಸಲಿದ್ದು ಜಾಥಾಗೆ ಮೆರಗು ನೀಡಲಿದೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘ ಕುಟುಂಬದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿರುತ್ತದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ