ರಿಯಾದ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೇರಳದ ಯುವಕನೊಬ್ಬ ಮೃತಪಟ್ಟಿದ್ದಾರೆ.
ಕೋಝಿಕೋಡ್ನ ಕೂಟಾಲಿಡ ನಡುವಣ್ಣೂರ್ ಮೂಲದ ಮುಹಮ್ಮದ್ ಅಜ್ಮಲ್ (27) ಎಂಬುವವರೇ ಮೃತಪಟ್ಟ ದುರ್ದೈವಿ. ಗುರುವಾರ ಇವರು ಕೆಲಸದ ನಿಮಿತ್ತ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಅಜ್ಮಲ್ ಅವರು ಅಲ್ಲಿನ ಬೇಕರಿಯೊಂದರಲ್ಲಿ ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದು, ಘಟನೆಯ ದಿನದಂದು ಅವರು ವ್ಯಾನ್ನಲ್ಲಿ ಖುಬ್ಝ್ (ರೊಟ್ಟಿ) ವಿತರಣೆಗಾಗಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ವ್ಯಾಪಿಸಿದ್ದು, ವ್ಯಾನ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಾಹನದೊಳಗೆ ಸಿಲುಕಿಕೊಂಡಿದ್ದ ಅಜ್ಮಲ್ ಅವರು ತೀವ್ರವಾಗಿ ಸುಟ್ಟ ಗಾಯಗಳಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಮಲ್ ಅವರು ಅಬ್ದುಲ್ ಅಜೀಜ್ ಮತ್ತು ರಝಿಯಾ ದಂಪತಿಯ ಪುತ್ರ. ಅವಿವಾಹಿತರಾಗಿದ್ದ ಇವರು ಉದ್ಯೋಗಕ್ಕಾಗಿ ಸೌದಿಗೆ ತೆರಳಿ ಕೇವಲ ಒಂಬತ್ತು ತಿಂಗಳು ಕಳೆಯುವಷ್ಟರಲ್ಲಿ ಈ ದುರಂತ ಸಂಭವಿಸಿದೆ.
ಪ್ರಸ್ತುತ ಮೃತದೇಹವನ್ನು ಅಲ್-ಅಹ್ಸಾದ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲು ಪ್ರಯತ್ನಗಳು ನಡೆಯುತ್ತಿವೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ