ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 28 ರಂದು ಬಕ್ರೀದ್ (ಈದುಲ್ ಅದ್ಹಾ) ಆಚರಿಸಲಾಗುವುದು. ಇಂದು (ದುಲ್ಖಅದ್ 29) ರಾಜ್ಯದ ಯಾವುದೇ ಭಾಗದಲ್ಲೂ ದುಲ್ ಹಜ್ಜ್ ತಿಂಗಳ ಚಂದ್ರದರ್ಶನವಾಗಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ, ಮೇ 18 ಸೋಮವಾರದಂದು ದುಲ್ಖಅದ್ 30 ದಿನಗಳನ್ನು ಪೂರ್ಣಗೊಳಿಸಿ, ಮೇ 19 ಮಂಗಳವಾರವನ್ನು ದುಲ್ ಹಜ್ಜ್ ತಿಂಗಳ ಮೊದಲ ದಿನವಾಗಿ ಪರಿಗಣಿಸಲಾಗುವುದು ಎಂದು ಖಾಝಿಗಳು ತಿಳಿಸಿದ್ದಾರೆ. ಮೇ.27 ರಂದು ಅರಫಾ ದಿನ ಆಗಿರಲಿದೆ. ಅಂದು ಉಪವಾಸ ಸುನ್ನತ್ ಇದೆ.
ಉಳ್ಳಾಲ ಮತ್ತು ಕೊಡಗು ಸಂಯುಕ್ತ ಮೊಹಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್, ಮಂಗಳೂರು ಹಾಗೂ ಸಂಯುಕ್ತ ಮೊಹಲ್ಲಾ ಜಮಾಅತ್ ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಮೊಹಲ್ಲಾ ಖಾಝಿಗಳಾದ ಝೈನುಲ್ ಉಲಮಾ ಮಾಣಿ ಉಸ್ತಾದ್ ಅವರು ಚಂದ್ರದರ್ಶನವಾಗದ ಬಗ್ಗೆ ಖಚಿತಪಡಿಸಿ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ