ಅಬುಧಾಬಿ: ಬಕ್ರೀದ್ ಹಬ್ಬದ ನಿಮಿತ್ತ ಯುಎಇಯ ವಿವಿಧ ಜೈಲುಗಳಲ್ಲಿರುವ ಸಾವಿರಾರು ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಯುಎಇ ಅಧ್ಯಕ್ಷರು ಮತ್ತು ವಿವಿಧ ಎಮಿರೇಟ್ಗಳ ಆಡಳಿತಗಾರರು ಆದೇಶಿಸಿದ್ದಾರೆ. ಕಾರುಣ್ಯ ಮತ್ತು ಸಾಮಾಜಿಕ ಐಕ್ಯತೆಯನ್ನು ಬೆಳೆಸುವ ಹಾಗೂ ಕೈದಿಗಳಿಗೆ ಜೀವನದಲ್ಲಿ ಎರಡನೇ ಅವಕಾಶ ನೀಡುವ ಭಾಗವಾಗಿ ಈ ಮಹತ್ತರ ಮಾನವೀಯ ಕ್ರಮ ಕೈಗೊಳ್ಳಲಾಗಿದೆ.
ಯುಎಇ ಅಧ್ಯಕ್ಷರಾದ ಶೈಖ್ ಮುಹಮ್ಮದ್ ಬಿನ್ ಝಾಯೆದ್ ಆಲ್ ನಹ್ಯಾನ್ ಅವರು ದೇಶದ ವಿವಿಧ ಸುಧಾರಣಾ ಮತ್ತು ಶಿಕ್ಷಾ ಕೇಂದ್ರಗಳಿಂದ 956 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಇವರು ವಿವಿಧ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವವರಾಗಿದ್ದಾರೆ. ಕೈದಿಗಳ ಬಿಡುಗಡೆಯ ಜೊತೆಗೆ, ಅವರ ಶಿಕ್ಷೆಯ ಅವಧಿಯಲ್ಲಿನ ಎಲ್ಲಾ ಆರ್ಥಿಕ ಹೊಣೆಗಾರಿಕೆಗಳು ಮತ್ತು ದಂಡಗಳನ್ನು ಸಹ ಪಾವತಿಸುವುದಾಗಿ ಯುಎಇ ಅಧ್ಯಕ್ಷರು ಘೋಷಿಸಿದ್ದಾರೆ. ಈ ಕ್ರಮವು ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಸಮಾಜದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಅಂಗವಾಗಿ ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರು ವಿವಿಧ ದೇಶಗಳ 836 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಸ್ ಅಲ್ ಖೈಮಾ ಆಡಳಿತಗಾರ ಶೈಖ್ ಸೌದ್ ಬಿನ್ ಸಕರ್ ಆಲ್ ಖಾಸಿಮಿ ಅವರು ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ 443 ಕೈದಿಗಳಿಗೆ ಕ್ಷಮಾದಾನ ಘೋಷಿಸಿದ್ದಾರೆ. ಅಜ್ಮಾನ್ ಆಡಳಿತಗಾರ ಶೈಖ್ ಹುಮೈದ್ ಬಿನ್ ರಾಶಿದ್ ಆಲ್ ನುಐಮಿ 230 ಕೈದಿಗಳನ್ನು ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ.
ಶಾರ್ಜಾ ಆಡಳಿತಗಾರ ಶೈಖ್ ಡಾ. ಸುಲ್ತಾನ್ ಬಿನ್ ಮುಹಮ್ಮದ್ ಆಲ್ ಖಾಸಿಮಿ ಅವರು ಹಬ್ಬದ ನಿಮಿತ್ತ 227 ಕೈದಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದ್ದಾರೆ. ಉಮ್ ಅಲ್ ಕುವೈನ್ ಆಡಳಿತಗಾರ ಶೈಖ್ ಸೌದ್ ಬಿನ್ ರಶೀದ್ ಅಲ್ ಮುಅಲ್ಲಾ ಕೂಡ ಜೈಲಿನಿಂದ ಹಲವು ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ