ದುಬೈ: ದುಬೈ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಇವರಲ್ಲಿ ಆರು ಮಂದಿ ಭಾರತೀಯರಾಗಿದ್ದಾರೆ. ಶ್ರೀಲಂಕಾ ಮತ್ತು ನೇಪಾಳದ ಪ್ರಜೆಗಳೂ ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರೆಲ್ಲರೂ ‘ಮೋಟೀವ್ ಟೆಕ್ನಿಕಲ್ ಸರ್ವೀಸ್’ (Motive Technical Service) ಕಂಪನಿಯ ಉದ್ಯೋಗಿಗಳಾಗಿದ್ದಾರೆ.
ತಾಂತ್ರಿಕ ದೋಷದಿಂದಾಗಿ ರಸ್ತೆಯ ಮಧ್ಯದಲ್ಲೇ ನಿಂತಿದ್ದ ಟ್ರಕ್‌ಗೆ ಮಿನಿಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ದುಬೈ ಪೊಲೀಸರು ತಿಳಿಸಿದ್ದಾರೆ. ಮುಂಭಾಗದ ಟ್ರಕ್‌ನಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳದಿರುವುದು ಮತ್ತು ಬಸ್ ಚಾಲಕನ ಗಮನದ ಕೊರತೆಯೇ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ. ಅಪಘಾತದ ಮಾಹಿತಿ ಲಭಿಸಿದ ತಕ್ಷಣವೇ ಪೊಲೀಸ್ ಗಸ್ತು ತಂಡ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನೂ ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಸಂಚಾರ ವಿಭಾಗದ ನಿರ್ದೇಶಕ ಜುಮಾ ಸಲೀಂ ಬಿನ್ ಸುವೈದಾನ್ ಸ್ಪಷ್ಟಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ