ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್ವೈಎಸ್ (SჄS) ಕಾರ್ಯಕರ್ತ ಶರೀಫ್ ಪರಪ್ಪು ಅವರ ಕುಟುಂಬಕ್ಕೆ ಆರ್ಥಿಕ ಆಸರೆ ನೀಡುವ ನಿಟ್ಟಿನಲ್ಲಿ, ಎಸ್ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಸಂಗ್ರಹಿಸಲಾದ ರೂ. 1,17,313 ಸಾಂತ್ವನ ನಿಧಿಯನ್ನು ಭಾನುವಾರ (ಜೂನ್ 14) ಹಸ್ತಾಂತರಿಸಲಾಯಿತು.
ಶರೀಫ್ ಪರಪ್ಪು ಅವರ ನಿವಾಸಕ್ಕೆ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಒಟ್ಟುಗೂಡಿಸಲಾದ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಎಸ್ವೈಎಸ್ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ, ಉಪಾಧ್ಯಕ್ಷರಾದ ಅಯ್ಯುಬ್ ಮಹ್ಳರಿ, ಕೆ.ವೈ. ಇಸ್ಮಾಯಿಲ್, ಕಾರ್ಯದರ್ಶಿ ಹಾರಿಸ್ ಕುಕ್ಕುಡಿ ಹಾಗೂ ಸಿದ್ದಿಕ್ ಪರಪ್ಪು ಉಪಸ್ಥಿತರಿದ್ದರು.
ಅಲ್ಲದೆ, ಎಸ್ವೈಎಸ್ ಸರ್ಕಲ್ ಪದಾಧಿಕಾರಿಗಳು, ಪರಪ್ಪು ಯೂನಿಟ್ ಜಮಾಅತ್ನ ನಾಯಕರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ