ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಅಂತಾರಾಷ್ಟ್ರೀಯ ಸಮಿತಿಯ ಮಹತ್ವಾಕಾಂಕ್ಷಿ “E-GEN Scholarship Empowering Generation” ಯೋಜನೆಗೆ ಇತ್ತೀಚೆಗೆ ಆನ್‌ಲೈನ್ (ವರ್ಚುವಲ್) ವೇದಿಕೆಯ ಮೂಲಕ ಅತ್ಯಂತ ಯಶಸ್ವಿಯಾಗಿ ಚಾಲನೆ ನೀಡಲಾಯಿತು.
ಸಯ್ಯಿದ್ ಆಬಿದ್ ಆಟಕೋಯ ಅಲ್-ಐದ್ರೋಸಿ ಎಮ್ಮೆಮಾಡು (ಒಮಾನ್) ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಭಕ್ತಿಪೂರ್ವಕವಾಗಿ ಆರಂಭಗೊಂಡಿತು. ಡಾ. ಇಕ್ಬಾಲ್ ಹಾಜಿ ಬರಕ (ಒಮಾನ್) ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಗೌರವಾಧ್ಯಕ್ಷರಾದ ಖುದ್ವತುಸ್ಸಾದಾತ್ ಸಯ್ಯಿದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಇದೇ ವೇಳೆ ಮಾಜಿ ಪೊಲೀಸ್ ಆಯುಕ್ತರಾದ ಜಿ.ಎ. ಬಾವಾ ಅವರು ಸ್ಕಾಲರ್‌ಶಿಪ್‌ನ ಅಧಿಕೃತ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ (ಅಬುಧಾಬಿ) ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಡಾ. ಎಂ.ಎಸ್.ಎಂ. ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಅವರು ಪ್ರಸ್ತುತ ಸಮಾಜದಲ್ಲಿ ಶಿಕ್ಷಣದ ಮಹತ್ವ ಹಾಗೂ ಮುಂದಿನ ಪೀಳಿಗೆಯನ್ನು ಸಬಲೀಕರಣಗೊಳಿಸುವಲ್ಲಿ ಇಂತಹ ಯೋಜನೆಗಳ ಅಗತ್ಯತೆಯನ್ನು ಸುದೀರ್ಘವಾಗಿ ವಿವರಿಸಿದರು. ಯುಎಇಯ ಡಾ. ತುಂಬೆ ಮೊಹಿದ್ದೀನ್ ಮತ್ತು ಡಾ. ಶೇಖ್ ಬಾವಾ ಮಂಗಳೂರು ಅವರು ಕಾರ್ಯಕ್ರಮಕ್ಕೆ ಶುಭಸಂದೇಶಗಳನ್ನು ಕೋರಿದರು.
ಇಕ್ಬಾಲ್ ಕಾಜೂರು ಅವರು ಈ ಸಂದರ್ಭದಲ್ಲಿ ಮಾತನಾಡಿ, “E-GEN” ಸ್ಕಾಲರ್‌ಶಿಪ್ ಯೋಜನೆಯ ಅರ್ಹತೆ, ಆಯ್ಕೆಯ ಮಾನದಂಡಗಳು ಹಾಗೂ ನಿಯಮಾವಳಿಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಿ. ಯೂಸುಫ್ ಸಖಾಫಿ ಬೈತಾರು, ಅಬ್ದುಲ್ ಹಮೀದ್ ಪಿ.ಎಂ.ಎಚ್., ಅಬೂಬಕರ್ ಹಾಜಿ ರೈಸ್ಕೋ ಸೇರಿದಂತೆ ಸೌದಿ ಅರೇಬಿಯಾ, ಯುಎಇ, ಕತಾರ್, ಒಮಾನ್, ಬಹರೈನ್, ಕುವೈತ್, ಯುನೈಟೆಡ್ ಕಿಂಗ್ಡಮ್, ಮಲೇಶಿಯಾ, ಈಜಿಪ್ಟ್, ಇರಾಕ್ ಹಾಗೂ ಜಪಾನ್ ಮುಂತಾದ ವಿವಿಧ ದೇಶಗಳ ಕೆಸಿಎಫ್ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ಆನ್‌ಲೈನ್ ಮೂಲಕ ಭಾಗವಹಿಸಿದ್ದರು.
ಮುಹಮ್ಮದ್ ಕಲ್ಲಾರ್ಬೆ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಮೂಸಾ ಹಾಜಿ ಬಸರ ಅವರು ತಾಂತ್ರಿಕ ಸಹಕಾರ ನೀಡಿದರೆ, ಕೊನೆಯಲ್ಲಿ ಝಕರಿಯ ಆನೇಕಲ್ ಅವರು ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ