ಕೋಝಿಕ್ಕೋಡ್: ಭಾರತದ ಗ್ರಾಂಡ್ ಮುಫ್ತಿ ಹಾಗೂ ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೆಸರಿನಲ್ಲಿ ಸತ್ಯಕ್ಕೆ ದೂರವಾದ ಮತ್ತು ಮಾನಹಾನಿಕರವಾದ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು (Fake Social Media Posts) ಹರಡುತ್ತಿರುವವರ ವಿರುದ್ಧ ದೂರು ದಾಖಲಿಸಲಾಗಿದೆ.
ಕಾಂತಪುರಂ ಅವರ ‘ವಸಿಯ್ಯತ್’ (ಮರಣಶಾಸನ/ಕೊನೆಯ ಇಚ್ಛೆ) ಎಂಬ ಹೆಸರಿನಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುವ, ಸತ್ಯಕ್ಕೆ ದೂರವಾದ ಹಾಗೂ ಮಾನಹಾನಿಕರವಾದ ಪೋಸ್ಟರ್ಗಳು ಮತ್ತು ವಿಡಿಯೋಗಳನ್ನು ಪ್ರಚಾರ ಮಾಡಿದ ಹತ್ತಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಮತ್ತು ಅದನ್ನು ಶೇರ್ ಮಾಡಿದವರ ವಿರುದ್ಧ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಕೋಝಿಕ್ಕೋಡ್ ಸಿಟಿ ಪೊಲೀಸ್ ಕಮಿಷನರ್ ಮತ್ತು ಕುಂದಮಂಗಲಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಇಂತಹ ನಕಲಿ ಪ್ರಚಾರಗಳ ಮೂಲಕ ದ್ವೇಷ ಮತ್ತು ನಿಂದನೆಯನ್ನು ಹರಡುತ್ತಿರುವವರನ್ನು ಕಾನೂನಿನ ಮುಂದೆ ತರಬೇಕು, ಮುಂದೆಯೂ ಇಂತಹ ಚಟುವಟಿಕೆಗಳನ್ನು ತಡೆಯಬೇಕು ಮತ್ತು ಅಪರಾಧಿಗಳಿಗೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಶಿಕ್ಷೆಯಾಗಬೇಕು ಎಂದು ಮರ್ಕಝ್ ಮೀಡಿಯಾ ಆಂಡ್ ಕಮ್ಯುನಿಕೇಷನ್ಸ್ ಜಂಟಿ ನಿರ್ದೇಶಕ ಶಮೀಮ್ ಕೆ.ಕೆ. ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ