ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಾದ್ಯಂತ ತುರ್ತು ಕ್ರಮಗಳನ್ನು ಕೈಗೊಂಡಿದೆ.
ದ.ಕ. ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಅವರು ಹೊರಡಿಸಿರುವ ಪ್ರಕಟಣೆಯ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ:
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
- ಜುಲೈ 08, 2026ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ (12ನೇ ತರಗತಿಯವರೆಗೆ) ವಸತಿ ಶಾಲೆ/ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಕಟ್ಟುನಿಟ್ಟಿನ ಸೂಚನೆಗಳು
- ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
- ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು.
- ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
ಅಧಿಕಾರಿಗಳಿಗೆ ಕಡ್ದಾಯ ಆದೇಶ
- ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು.
- ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
- ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಬೇಕು.
ತುರ್ತು ಸಹಾಯವಾಣಿ ಸಂಖ್ಯೆಗಳು
ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- ಟೋಲ್ ಫ್ರೀ ಸಂಖ್ಯೆ: 1077
- ದೂರವಾಣಿ ಸಂಖ್ಯೆ: 0824-2442590
















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ