ಮಂಗಳೂರು: ಇಲ್ಲಿನ ಹೊರವಲಯದ ಕೃಷ್ಣಾಪುರದಲ್ಲಿ ಮದ್ರಸ ಮುಅಲ್ಲಿಮರೊಬ್ಬರ (ಧಾರ್ಮಿಕ ಶಿಕ್ಷಕರು) ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆಎಂ) ದಕ್ಷಿಣ ಕನ್ನಡ ಸೌತ್ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ. ಈ ಕುರಿತು ಸಮಿತಿಯು ವಿಶೇಷ ಖಂಡನಾ ನಿರ್ಣಯವನ್ನು ಅಂಗೀಕರಿಸಿದೆ.
ಸಮಾಜಕ್ಕೆ ತಪ್ಪು ಸಂದೇಶ:
ಧಾರ್ಮಿಕ ಶಿಕ್ಷಣದ ಮೂಲಕ ಮಕ್ಕಳಿಗೆ ಸಂಸ್ಕಾರ ಹಾಗೂ ಒಳಿತನ್ನು ಬೋಧಿಸುವ ಮುಅಲ್ಲಿಮರು ಸಮಾಜದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಉತ್ತಮ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣದಲ್ಲಿ ಅವರ ಪಾತ್ರ ಅಪಾರವಾಗಿದೆ. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರನ್ನು ಬಹಿರಂಗವಾಗಿ ತೆಗಳುವುದು ಹಾಗೂ ಅವರ ಮೇಲೆ ಹಲ್ಲೆ ನಡೆಸುವುದು ಅಕ್ಷಮ್ಯ ಅಪರಾಧವಾಗಿದೆ. ಈ ರೀತಿಯ ಘಟನೆಗಳು ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಲ್ಲದೆ, ಇಡೀ ಸಮಾಜದಲ್ಲಿ ದುಷ್ಪರಿಣಾಮ ಬೀರಲಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.
ಸಮಿತಿಯ ಎಚ್ಚರಿಕೆ:
ಪ್ರಸ್ತುತ ದಿನಗಳಲ್ಲಿ ಮುಅಲ್ಲಿಮರು ಅತ್ಯಂತ ಕಡಿಮೆ ಸಂಬಳದಲ್ಲೇ ತೃಪ್ತಿಪಟ್ಟುಕೊಂಡು ಧಾರ್ಮಿಕ ಸೇವೆಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಹಲವರು ಈ ಕ್ಷೇತ್ರದಿಂದ ಹಿಂದೆ ಸರಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಸಮಾಜದಲ್ಲಿ ಕನಿಷ್ಠ ಗೌರವ ಹಾಗೂ ರಕ್ಷಣೆಯೂ ಸಿಗದಿದ್ದರೆ, ಅವರು ಈ ಕ್ಷೇತ್ರದಿಂದ ಸಂಪೂರ್ಣವಾಗಿ ಹೊರಹೋಗುವ ಅಪಾಯವಿದೆ. ಮುಅಲ್ಲಿಮರು ಈ ಕ್ಷೇತ್ರದಿಂದ ದೂರವಾದರೆ ಸಮಾಜವು ಭವಿಷ್ಯದಲ್ಲಿ ಇದಕ್ಕಾಗಿ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಸಮಿತಿಯು ಸಮಾಜಕ್ಕೆ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ