ದುಬೈ: ಎಮಿರೇಟ್ಸ್ ವಿಮಾನದಲ್ಲಿ ಇನ್ನು ಮುಂದೆ ಟಿಕೆಟ್ ದರವನ್ನು ಇಎಂಐ (EMI) ಮೂಲಕ ಪಾವತಿಸಬಹುದಾಗಿದೆ. ಭಾರತದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ವಿಮಾನ ಪ್ರಯಾಣದ ದರವನ್ನು ಮಾಸಿಕ ಕಂತುಗಳಲ್ಲಿ ಪಾವತಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಟಿಕೆಟ್ ಬುಕ್ ಮಾಡುವಾಗ ಟಿಕೆಟ್‌ನ ಪೂರ್ಣ ಮೊತ್ತವನ್ನು ಒಟ್ಟಿಗೆ ಪಾವತಿಸುವ ಬದಲು, ಆ ಹಣವನ್ನು ಮೂರರಿಂದ 36 ತಿಂಗಳವರೆಗಿನ ಅವಧಿಗೆ ಕಂತುಗಳಾಗಿ ಪಾವತಿಸುವ ಸೌಲಭ್ಯವನ್ನು ಎಮಿರೇಟ್ಸ್ ಪರಿಚಯಿಸುತ್ತಿದೆ. ಭಾರತದಿಂದ emirates.com ವೆಬ್‌ಸೈಟ್ ಮೂಲಕ ಕ್ರೆಡಿಟ್ ಕಾರ್ಡ್ ಬಳಸಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಈ ಸೌಲಭ್ಯ ಲಭ್ಯವಿರಲಿದೆ. ಫ್ಲೆಕ್ಸಿಬಲ್ ಪೇಮೆಂಟ್ (Flexible Payment) ಆಯ್ಕೆಯನ್ನು ಆರಿಸಿಕೊಂಡು 140 ನಗರಗಳವರೆಗೆ ಟಿಕೆಟ್ ಪಡೆದುಕೊಳ್ಳಬಹುದು.
ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಎಚ್‌ಡಿಎಫ್‌ಸಿ (HDFC), ಎಚ್‌ಎಸ್‌ಬಿಸಿ (HSBC), ಐಸಿಐಸಿಐ (ICICI), ಐಡಿಬಿಐ (IDBI), ಇಂಡಸ್‌ಇಂಡ್, ಕೋಟಕ್ ಮಹೀಂದ್ರಾ, ಆರ್‌ಬಿಎಲ್ (RBL), ಸ್ಟ್ಯಾಂಡರ್ಡ್ ಚಾರ್ಟರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಯೆಸ್ ಬ್ಯಾಂಕ್ ಈ ಯೋಜನೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಬ್ಯಾಂಕುಗಳಾಗಿವೆ.
ಬಹಳ ದಿನಗಳಿಂದ ಬಯಸುತ್ತಿದ್ದ ರಜಾದಿನಗಳ ಪ್ರವಾಸವನ್ನು ಸಾಧ್ಯವಾಗಿಸಲು ಇದು ಗ್ರಾಹಕರಿಗೆ ಅನುಕೂಲ ಮಾಡಿಕೊಡಲಿದೆ ಎಂದು ಎಮಿರೇಟ್ಸ್ ಇಂಡಿಯಾ ವೈಸ್ ಪ್ರೆಸಿಡೆಂಟ್ ಮೊಹಮ್ಮದ್ ಸರ್ಹಾನ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ