ಮಂಗಳೂರು : ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಿರುವ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿರುವ ಅಸಂಖ್ಯಾತ ಅನಿವಾಸಿ ಮಿತ್ರರು ಆತಂಕದಲ್ಲಿದ್ದು ವ್ಯಾಪಾರ ವಹಿವಾಟುಗಳು ಕೂಡ ಗಣನೀಯವಾಗಿ ಕುಸಿದಿದೆ. ಅನಿವಾಸಿಗಳು ನಮ್ಮ ಕುಟುಂಬಗಳ ಉಸಿರಾಗಿದ್ದು, ಕುಟುಂಬದ ಭಾರ ಹೊತ್ತು ಕಡಲು ದಾಟಿ ವಿದೇಶದ ನೆಲದಲ್ಲಿ ಬೆವರು ಸುರಿಸುವವರು. ಕುಟುಂಬದ ಜೊತೆಗೆ ನಾಡಿನ ಧಾರ್ಮಿಕ ಚಟುವಟಿಕೆಗಳು ಮಸೀದಿ ಮದ್ರಸಾಗಳು , ಹತ್ತು ಹಲವು ಚಾರಿಟಿಗಳು ಹಾಗೂ ಸಂಘಸಂಸ್ಥೆಗಳ ಬೆನ್ನೆಲುಬಾಗಿ ನಿಂತಿದ್ದಾರೆ. ಆದ್ದರಿಂದಲೇ ಅವರ ಸಂಕಷ್ಟದಲ್ಲಿ ಭಾಗಿಯಾಗಿ ಅವರಿಗಾಗಿ ಪ್ರಾರ್ಥಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸಭೆ ಅಭಿಪ್ರಾಯ ಪಟ್ಟಿತು.
ನಮ್ಮ ಅನಿವಾಸಿ ಮಿತ್ರರಿಗಾಗಿ ಇದೇ ಬರುವ ಜುಲೈ 24 ಶುಕ್ರವಾರದಂದು ಎಲ್ಲಾ ಯೂನಿಟ್ ಕೇಂದ್ರಗಳಲ್ಲಿ ನಾರಿಯತುಸ್ಸಲಾತ್ ಹಾಗೂ ದುಆಉಲ್ ಖರ್ಬ್ ಮಜ್ಲಿಸ್ ನಡೆಸಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಎಸ್ಸೆಸ್ಸೆಫ್ ಕರೆ ನೀಡಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಫಿನಾನ್ಸ್ ಕಾರ್ಯದರ್ಶಿ ಅನ್ವರ್ ಅಸ್ಸಅದಿ ಸಹಿತ ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ