ದೋಹಾ: ಪ್ಯಾಲೆಸ್ಟೈನ್‌ನ ಇಸ್ರೇಲಿ ವಸಾಹತು ಪ್ರದೇಶಗಳಿಂದ ಉತ್ಪನ್ನಗಳ ಆಮದನ್ನು ನಿಷೇಧಿಸಿ ಐರ್ಲೆಂಡ್ ಅಂಗೀಕರಿಸಿದ ಕಾನೂನನ್ನು ಕತಾರ್ ಸ್ವಾಗತಿಸಿದೆ. ಇಸ್ರೇಲ್‌ನ ವಸಾಹತುಶಾಹಿ ನೀತಿಗಳನ್ನು ಎದುರಿಸುವ ಪ್ರಯತ್ನಗಳಿಗೆ ಬಲ ನೀಡುವ ಪ್ರಮುಖ ಹೆಜ್ಜೆ ಇದಾಗಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್‌ನ ವಸಾಹತುಶಾಹಿ ನೀತಿಗಳು ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದ ಬಹಿರಂಗ ಉಲ್ಲಂಘನೆಯಾಗಿದೆ ಎಂದು ಕತಾರ್ ಬೆಟ್ಟುಮಾಡಿದೆ. ಇದು ಪ್ಯಾಲೆಸ್ಟೈನ್ ಜನರ ಹಕ್ಕುಗಳ ಮೇಲಿನ ಅತಿಕ್ರಮಣವೂ ಆಗಿದೆ. ಇನ್ನಷ್ಟು ದೇಶಗಳು ಇಂತಹದೇ ಕ್ರಮಗಳನ್ನು ಕೈಗೊಳ್ಳಲಿವೆ ಎಂದು ನಿರೀಕ್ಷಿಸುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪ್ಯಾಲೆಸ್ಟೈನ್‌ನಲ್ಲಿನ ಅಕ್ರಮ ವಸಾಹತುಗಳನ್ನು ಅಂತ್ಯಗೊಳಿಸಲು ಇಸ್ರೇಲ್ ಮೇಲೆ ಒತ್ತಡ ಹೇರಬೇಕಾದ ಕಾನೂನಾತ್ಮಕ ಮತ್ತು ನೈತಿಕ ಜವಾಬ್ದಾರಿ ಅಂತಾರಾಷ್ಟ್ರೀಯ ಸಮುದಾಯಕ್ಕಿದೆ. ಪ್ಯಾಲೆಸ್ಟೈನ್ ವಿಚಾರದಲ್ಲಿ ಕತಾರ್ ತನ್ನ ನಿಲುವನ್ನು ಪುನರುಚ್ಛರಿಸಿದೆ. 1967ರ ಗಡಿಗಳನ್ನು ಗುರುತಿಸಿ, ಪೂರ್ವ ಜೆರುಸಲೇಂ ಅನ್ನು ರಾಜಧಾನಿಯಾಗಿ ಹೊಂದಿರುವ ಸ್ವತಂತ್ರ ಪ್ಯಾಲೆಸ್ಟೈನ್ ರಾಷ್ಟ್ರವನ್ನು ಸ್ಥಾಪಿಸುವ ದ್ವಿರಾಷ್ಟ್ರ ಪರಿಹಾರದ ಮೂಲಕ ಮಾತ್ರ ಶಾಶ್ವತ ಶಾಂತಿ ಸಾಧ್ಯ ಎಂದು ಕತಾರ್ ಸ್ಪಷ್ಟಪಡಿಸಿದೆ.















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ