ಕೋಝಿಕ್ಕೋಡ್: ಮುಸ್ಲಿಂ ಮಹಿಳೆಯರು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸುವುದಕ್ಕೆ ಸಂಬಂಧಿಸಿದಂತೆ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ನೀಡಿದ ಹೇಳಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿರುದ್ಧ ಎಸ್ಎಸ್ಎಫ್ (ಕೇರಳ ಸ್ಟೇಟ್ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಪ್ರತಿಕ್ರಿಯಿಸಿದೆ. “ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ; ಮುಖ್ಯಮಂತ್ರಿ ಆಡಳಿತ ನಡೆಸಲಿ” ಎಂದು ಎಸ್ಎಸ್ಎಫ್ ಕೇರಳ ತನ್ನ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿದೆ.
ಕಾಂತಪುರಂ ಇಸ್ಲಾಂ ಅನ್ನು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ ಎಂಬ ಮುಖ್ಯಮಂತ್ರಿ ಅವರ ಹೇಳಿಕೆ ಸಂಪೂರ್ಣ ಸುಳ್ಳಾಗಿದ್ದು, ಹೇಳಿಕೆಯನ್ನು ಹಿಂಪಡೆದು ಮುಸ್ಲಿಂ ಸಮುದಾಯದ ಕ್ಷಮೆ ಕೇಳಬೇಕು ಎಂದು ಕೇರಳ ಮುಸ್ಲಿಂ ಜಮಾಅತ್ ಮಲಪ್ಪುರಂ ಜಿಲ್ಲಾ ಸಮಿತಿಯೂ ಆಗ್ರಹಿಸಿತ್ತು. ಇಸ್ಲಾಮಿಕ್ ಇತಿಹಾಸ ಮತ್ತು ಘಟನೆಗಳನ್ನು ತಪ್ಪಾಗಿ ಅರ್ಥೈಸಿಕೊಂಡು, ಅದರ ಸಂದರ್ಭವನ್ನೂ ಅರ್ಥಮಾಡಿಕೊಳ್ಳದೆ ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಮುಖ್ಯಮಂತ್ರಿ ಹುದ್ದೆಗೆ ತಕ್ಕದ್ದಲ್ಲ ಎಂದು ಸಮಿತಿಯು ಆರೋಪಿಸಿತ್ತು.
ಮಹಿಳೆಯರು ಸಾರ್ವಜನಿಕ ಕ್ಷೇತ್ರಕ್ಕೆ ಬಂದರೆ ದೊಡ್ಡ ಅನಾಹುತ ಸಂಭವಿಸುತ್ತದೆ ಎಂಬ ಕಾಂತಪುರಂ ಅವರ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸತೀಶನ್ ಇಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದರು.
“ಮಹಿಳೆಯರು ಮನೆಯೊಳಗೆ ಸೀಮಿತವಾಗಿ ಬದುಕಬೇಕಾದವರಲ್ಲ. ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಭಾಗವಹಿಸಿ ಬದುಕಬೇಕು ಎಂಬುದು ನಮ್ಮ ಪ್ರಗತಿಪರ ನಿಲುವಾಗಿದೆ. ಇಸ್ಲಾಮಿಕ್ ಇತಿಹಾಸವೂ ಅದನ್ನೇ ಹೇಳುತ್ತದೆ. ಇಸ್ಲಾಂ ಅನ್ನು ಕೂಡ ತಪ್ಪಾಗಿ ವ್ಯಾಖ್ಯಾನಿಸುವುದೇ ಅವರ ಅಭಿಪ್ರಾಯ” ಎಂದು ಸತೀಶನ್ ಹೇಳಿದ್ದರು.
ಮಹಿಳೆಯರು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಿದರೆ ಅದು ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ ಮತ್ತು ಆ ಅಪಾಯವನ್ನು ತಪ್ಪಿಸುವುದಕ್ಕಾಗಿಯೇ ಇಸ್ಲಾಂ ಧರ್ಮವು ಪರ್ದಾ ಪದ್ಧತಿಯನ್ನು ನಿಗದಿಪಡಿಸಿದೆ ಎಂದು ಕಾಂತಪುರಂ ಕಳೆದ ದಿನ ಅಭಿಪ್ರಾಯಪಟ್ಟಿದ್ದರು.
ಮಹಿಳೆಯರು ಮನೆಯಲ್ಲೇ ಸೀಮಿತವಾಗಿ ಇರಬೇಕು ಎಂದೂ, ಇಸ್ಲಾಂ ಧರ್ಮದ ಕುರಿತು ವ್ಯಾಪಕವಾಗಿ ಹಾಗೂ ಆಳವಾಗಿ ಅಧ್ಯಯನ ಮಾಡಿರುವ ವ್ಯಕ್ತಿಯಾಗಿರುವುದರಿಂದ ಮುಸ್ಲಿಂ ಸಮುದಾಯದ ವಿಷಯಗಳಲ್ಲಿ ಮಾತನಾಡಲು ಮತ್ತು ತನ್ನ ನಿಲುವುಗಳನ್ನು ಸ್ಪಷ್ಟಪಡಿಸಲು ತಮಗೆ ಸಂಪೂರ್ಣ ಅಧಿಕಾರವಿದೆ ಎಂದೂ ಅವರು ಸ್ಪಷ್ಟಪಡಿಸಿದ್ದರು.
















ಇನ್ನಷ್ಟು ಸುದ್ದಿಗಳು
ಇಂದು ಕಾಪುವಿನಲ್ಲಿ ಐತಿಹಾಸಿಕ ಸಮಸ್ತ ತಾತ್ವಿಕ ಸಮಾವೇಶ- ಎಸ್ಸೆಸ್ಸೆಫ್ ಕಾಪು ಡಿವಿಷನ್ ಯಶಸ್ವಿಗೆ ಕರೆ
ರಾಷ್ಟ್ರಮಟ್ಟದ ಹ್ಯಾಕಥಾನ್ನಲ್ಲಿ ಅಫ್ನಾಜ್ಗೆ ದ್ವಿತೀಯ ಸ್ಥಾನ
ಬಿಳಿ ಬಣ್ಣದ ಮದುವೆ ಉಡುಗೆಯನ್ನು ಹೊದಿಸಿ ಅಸ್ಸಾ ರಮ್ಸಿಗೆ ಕಣ್ಣೀರಿನ ವಿದಾಯ
‘ಪೈಲಟ್ ಸ್ಮಿತ್ ಮಚ್ಚಾರ್ ಯುಎಇಯ ಹೆಮ್ಮೆ’ ; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಶೈಖ್ ಹಮ್ದಾನ್
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್