janadhvani

Kannada Online News Paper

ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ

ಮಂಗಳೂರು: ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ (ರಿ.) ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ಅವರ 1501ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳೂರಿನ ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆಯ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್ 3ರಂದು ಬೆಳಗ್ಗೆ 11.15ಕ್ಕೆ ಯಶಸ್ವಿಯಾಗಿ ನಡೆಯಿತು.

ಪ್ರವಾದಿ ಮುಹಮ್ಮದ್ ﷺ ಅವರ ಮಾನವೀಯತೆ, ಕರುಣೆ ಮತ್ತು ಸಮಾಜ ಸೇವೆಯ ಸಂದೇಶವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾಜಮುಖಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ಕುಡಿಯುವ ನೀರಿನ ಸೌಲಭ್ಯವನ್ನು ಅರ್ಪಿಸಲಾಯಿತು.
ಉಪಸ್ಥಿತರಿದ್ದ ಗಣ್ಯರು:

  • ಡಾ. ದುರ್ಗಾಪ್ರಸಾದ್ ಎಂ.ಆರ್ – ವೈದ್ಯಕೀಯ ಅಧೀಕ್ಷಕರು, ಸರ್ಕಾರಿ ಲೇಡಿ ಗೋಶನ್ ಆಸ್ಪತ್ರೆ, ಮಂಗಳೂರು
  • ಡಾ. ಜಗದೀಶ್ – ವಸತಿ ವೈದ್ಯಾಧಿಕಾರಿ (RMO), ಲೇಡಿ ಗೋಶನ್ ಆಸ್ಪತ್ರೆ
  • ಶಮೀಮ್‌ ಕುಟ್ಟಿಕಳ – ಅಧ್ಯಕ್ಷರು, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
  • ಹನೀಫ್‌ ಸಾಲೆತ್ತೂರು – ಉಪಾಧ್ಯಕ್ಷರು, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
  • ಹಬೀಬ್‌ ಉಳಾಯಿಬೆಟ್ಟು – ಕಾರ್ಯದರ್ಶಿ, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
  • ಶಕೀಲ್‌ ಹೈದರ್‌ – ಕೋಶಾಧಿಕಾರಿ, ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್
    (ಟ್ರಸ್ಟ್‌ನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು).

ಸಂಸ್ಥೆಯ ಕಿರು ಪರಿಚಯ:
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಕಳೆದ 8 ವರ್ಷಗಳಿಂದ ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷವಾಗಿ ಕ್ಯಾನ್ಸರ್ ಮತ್ತು ಡಯಾಲಿಸಿಸ್ ರೋಗಿಗಳಿಗೆ ಆರ್ಥಿಕ ಹಾಗೂ ವೈದ್ಯಕೀಯ ನೆರವು ನೀಡುವ ಜೊತೆಗೆ, ವಿವಿಧ ಆರೈಕೆ ಕೇಂದ್ರಗಳಿಗೆ ಅಗತ್ಯ ಸಹಾಯ ಒದಗಿಸುವ ಮೂಲಕ ಮಾದರಿ ಮಾನವೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ.

ಇದನ್ನೂ ಓದಿರಿ...