ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ನೋಟೀಸ್ ತಲುಪಿ ಆತಂಕಕ್ಕೊಳಗಾಗಿರುವ ಅನಿವಾಸಿ ಭಾರತೀಯರಿಗೆ (NRI) ಶೀಘ್ರವೇ ಸೂಕ್ತ ಪರಿಹಾರ ದೊರೆಯಲಿದೆ ಎಂದು SKSSF ಕರ್ನಾಟಕ ರಾಜ್ಯ ಉಪಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಈ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಯು. ಟಿ. ಖಾದರ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದೇಶದಲ್ಲಿರುವ ಕನ್ನಡಿಗರು ಮತ್ತು ಭಾರತೀಯರು ಎದುರಿಸುತ್ತಿರುವ ಗೊಂದಲಕ್ಕೆ ಶೀಘ್ರದಲ್ಲೇ ಮುಕ್ತಿ ಸಿಗಲಿದೆ ಎಂದಿದ್ದಾರೆ.
ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗವು ಸರಳವಾದ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ಸಾಧ್ಯತೆಯಿದೆ. ಅನಿವಾಸಿ ಭಾರತೀಯರು ತಮ್ಮ ಪಾಸ್‌ಪೋರ್ಟ್ ಹಾಗೂ ಅಗತ್ಯ ದಾಖಲಾತಿಗಳನ್ನು ಒದಗಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗುವುದು. ಈ ಕುರಿತು ಮುಂದಿನ ಎರಡೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬರುವ ನಿರೀಕ್ಷೆಯಿದೆ ಎಂದು ಯು. ಟಿ. ಖಾದರ್ ಭರವಸೆ ನೀಡಿದ್ದಾರೆ.
ಆದ್ದರಿಂದ ವಿದೇಶದಲ್ಲಿರುವ ಭಾರತೀಯರು ಹಾಗೂ ಅವರ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಗಾಬರಿಯಾಗುವ ಅಥವಾ ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ಇಕ್ಬಾಲ್ ಬಾಳಿಲ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’