ಮಂಗಳೂರು: ವಿಶ್ವಪ್ರಸಿದ್ಧ ವಿದ್ವಾಂಸರೂ, ಮರ್ಕಝ್ ಶಿಕ್ಷಣ ಸಂಸ್ಥೆಗಳ ರೂವಾರಿಯೂ ಆಗಿರುವ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರಿಗೆ ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.

ಭಾರತ ಹಾಗೂ ವಿದೇಶಗಳಲ್ಲಿ ಕಳೆದ ಆರು ದಶಕಗಳಿಂದ ಶಿಕ್ಷಣ, ಸಾಮಾಜಿಕ ಕಲ್ಯಾಣ ಮತ್ತು ಮಾನವೀಯ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸಮಗ್ರ ಸೇವೆಗಳನ್ನು ಪರಿಗಣಿಸಿ ವಿಶ್ವವಿದ್ಯಾಲಯವು ಡಿ.ಲಿಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರಿನ ದೇರಳಕಟ್ಟೆಯಲ್ಲಿರುವ ಯೆನೆಪೊಯ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ. ಯೆನೆಪೊಯ ಅಬ್ದುಲ್ಲ ಕುಂಞಿ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.


ಭಾರತದ ಗ್ರ್ಯಾಂಡ್ ಮುಫ್ತಿ ಹಾಗೂ ಅಖಿಲ ಭಾರತ ಸುನ್ನಿ ಜಂಇಯ್ಯತುಲ್ ಉಲಮಾದ ನಾಯಕರಾಗಿ ಅಸಂಖ್ಯಾತ ಜನರಿಗೆ ಪ್ರೇರಣೆಯಾಗಿರುವ ಕಾಂತಪುರಂ ಅವರು ಶಿಕ್ಷಣ, ಸಾಮಾಜಿಕ ಕಲ್ಯಾಣ, ಶಾಂತಿ, ಐಕ್ಯತೆ ಮತ್ತು ರಾಷ್ಟ್ರ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಅಂತಹ ಮಹಾನ್ ವ್ಯಕ್ತಿಯನ್ನು ಗೌರವಿಸುವುದು ಯೆನೆಪೊಯ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಯೆನೆಪೊಯ ಅಬ್ದುಲ್ಲ ಕುಂಞಿ ಹೇಳಿದರು.
ಶಿಕ್ಷಣವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹಾಗೂ ಜವಾಬ್ದಾರಿಯುತ, ಸಹಾನುಭೂತಿ ಹೊಂದಿರುವ ಮತ್ತು ಸಾಮಾಜಿಕ ಪ್ರಜ್ಞೆಯುಳ್ಳ ನಾಗರಿಕರನ್ನು ರೂಪಿಸುವಲ್ಲಿ ಕಾಂತಪುರಂ ಉಸ್ತಾದ್ ಸಲ್ಲಿಸಿರುವ ಸೇವೆಗಳು ಅಮೂಲ್ಯವಾದವು ಎಂದು ಅವರು ಗೌರವ ಡಾಕ್ಟರೇಟ್ ಪ್ರದಾನ ಸಂದರ್ಭದಲ್ಲಿ ತಿಳಿಸಿದರು.
ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಕಾಂತಪುರಂ ಉಸ್ತಾದ್, ಮನುಷ್ಯನನ್ನು ಸಂಸ್ಕರಿಸಿ ಪ್ರಗತಿಯತ್ತ ಮುನ್ನಡೆಸಲು ಶಿಕ್ಷಣ ಅತ್ಯಗತ್ಯ ಎಂಬ ಇಸ್ಲಾಮಿನ ಪರಿಕಲ್ಪನೆಯಿಂದ ಪ್ರೇರಿತರಾಗಿ, ಅಧ್ಯಯನದ ಬಳಿಕ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಚಟುವಟಿಕೆಗಳಲ್ಲಿ ಗಮನ ಹರಿಸಿದ್ದಾಗಿ ಹೇಳಿದರು. ಅಲ್ಲಾಹನ ಅಪಾರ ಅನುಗ್ರಹದಿಂದ ಮರ್ಕಝ್ ಸೇರಿದಂತೆ ಹಲವು ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲು ಸಾಧ್ಯವಾಯಿತು ಎಂದು ಅವರು ತಿಳಿಸಿದರು.
ಯೆನೆಪೊಯ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಅಂಗವಾಗಿ ಸಂಜೆ 3 ಗಂಟೆಗೆ ಯೆಂಡ್ಯುರನ್ಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಪ್ರಮುಖರು ಭಾಗವಹಿಸಿದ್ದರು.
ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಎಸ್. ಗಂಗಾಧರ ಸೋಮಯಾಜಿ, ರಿಜಿಸ್ಟ್ರಾರ್ ಡಾ. ಅಶ್ವಿನ್ ದತ್, ಪ್ರೊ-ಚಾನ್ಸಲರ್‌ಗಳಾದ ಡಾ. ವಿಜಯಕುಮಾರ್ ಮತ್ತು ಡಾ. ಮೊಹಮ್ಮದ್ ಫರ್ಹಾದ್ ಯೆನೆಪೊಯ, ಪರೀಕ್ಷಾ ನಿಯಂತ್ರಕ ಡಾ. ಬಿ.ಟಿ. ನಂದೀಶ್, ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್‌ನ ಟ್ರಸ್ಟಿ ಡಾ. ಹಬೀಬ್ ರಹ್ಮಾನ್ ಹಾಗೂ ಜಾಮಿಅ ಮರ್ಕಝ್‌ನ ಪ್ರೊ-ಚಾನ್ಸಲರ್ ಡಾ. ಹುಸೈನ್ ಸಖಾಫಿ ಚುಳ್ಳಿಕೋಡ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಮಾತನಾಡಿದರು.















ಇನ್ನಷ್ಟು ಸುದ್ದಿಗಳು
ಜೈಲು ಕಂಬಿಗಳ ಹಿಂದೆ ನರಳುವ ಜೀವಗಳು: ಕರಾಳ ಮಾದಕವಸ್ತು ಜಾಲದ ಕ್ರೂರ ಮುಖ
ಇಂದು ಕಾಪುವಿನಲ್ಲಿ ಐತಿಹಾಸಿಕ ಸಮಸ್ತ ತಾತ್ವಿಕ ಸಮಾವೇಶ- ಎಸ್ಸೆಸ್ಸೆಫ್ ಕಾಪು ಡಿವಿಷನ್ ಯಶಸ್ವಿಗೆ ಕರೆ
ರಾಷ್ಟ್ರಮಟ್ಟದ ಹ್ಯಾಕಥಾನ್ನಲ್ಲಿ ಅಫ್ನಾಜ್ಗೆ ದ್ವಿತೀಯ ಸ್ಥಾನ
ಬಿಳಿ ಬಣ್ಣದ ಮದುವೆ ಉಡುಗೆಯನ್ನು ಹೊದಿಸಿ ಅಸ್ಸಾ ರಮ್ಸಿಗೆ ಕಣ್ಣೀರಿನ ವಿದಾಯ
‘ಪೈಲಟ್ ಸ್ಮಿತ್ ಮಚ್ಚಾರ್ ಯುಎಇಯ ಹೆಮ್ಮೆ’ ; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಶೈಖ್ ಹಮ್ದಾನ್
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ