ಬೆಂಗಳೂರು: ಅನಿವಾಸಿ ಕನ್ನಡಿಗರ ಕ್ರಿಯಾಶೀಲ ಸಂಘಟನೆಯಾಗಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.
ಕಳೆದ ಹದಿಮೂರು ವರ್ಷಗಳಿಂದ ಅನಿವಾಸಿ ಕನ್ನಡಿಗರ ನಡುವೆ ಧಾರ್ಮಿಕ ಜಾಗೃತಿ, ಸಮಾಜ ಸೇವೆ, ಶೈಕ್ಷಣಿಕ ಪ್ರಗತಿ ಹಾಗೂ ಪರಸ್ಪರ ಸಹಕಾರದ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕೆಸಿಎಫ್, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು SSF ರಾಜ್ಯ ಸಮಿತಿ ತಿಳಿಸಿದೆ.
ಗಲ್ಫ್ ರಾಷ್ಟ್ರಗಳು ಸೇರಿದಂತೆ ಹನ್ನೊಂದು ದೇಶಗಳಲ್ಲಿ ರಾಷ್ಟ್ರೀಯ ಘಟಕಗಳನ್ನು ಹೊಂದಿರುವ ಕೆಸಿಎಫ್, ಉದ್ಯೋಗ ಹಾಗೂ ವ್ಯಾಪಾರ ನಿಮಿತ್ತ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ನಡುವೆ ಸಹೋದರತೆ, ಸೌಹಾರ್ದತೆ ಮತ್ತು ಪರಸ್ಪರ ಸಹಕಾರವನ್ನು ಬೆಳೆಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ತಾಯ್ನಾಡಿನಿಂದ ದೂರವಿದ್ದರೂ ತಮ್ಮ ನಾಡು, ಭಾಷೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಂಬಂಧಗಳೊಂದಿಗೆ ನಿಕಟ ಸಂಪರ್ಕ ಉಳಿಸಿಕೊಳ್ಳಲು ಸಂಘಟನೆ ವೇದಿಕೆಯನ್ನು ಒದಗಿಸುತ್ತಿದೆ.
ಧಾರ್ಮಿಕ ಬೋಧನೆ, ಸಾಮಾಜಿಕ ಸೇವಾ ಚಟುವಟಿಕೆಗಳು, ಶೈಕ್ಷಣಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಿವಿಧ ಯೋಜನೆಗಳ ಮೂಲಕ ಕೆಸಿಎಫ್ ಅನಿವಾಸಿ ಕನ್ನಡಿಗರ ನಡುವೆ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದೆ ಎಂದು ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದೆ.
ನವೆಂಬರ್ 11ರಿಂದ ಡಿಸೆಂಬರ್ 13ರವರೆಗೆ ಸದಸ್ಯತ್ವ ಅಭಿಯಾನ
ಕೆಸಿಎಫ್ನ ಸದಸ್ಯತ್ವ ಅಭಿಯಾನವು ನವೆಂಬರ್ 11ರಿಂದ ಡಿಸೆಂಬರ್ 13ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಹೆಚ್ಚಿನ ಸಂಖ್ಯೆಯ ಕನ್ನಡಿಗ ಮುಸ್ಲಿಂ ಸಹೋದರರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವ ಉದ್ದೇಶ ಹೊಂದಲಾಗಿದೆ.
ಈ ಹಿನ್ನೆಲೆಯಲ್ಲಿ SSF ಕರ್ನಾಟಕ ರಾಜ್ಯ ಸಮಿತಿಯ ಅಧೀನದಲ್ಲಿರುವ ಎಲ್ಲಾ ಜಿಲ್ಲಾ, ಝೋನ್, ಸೆಕ್ಟರ್ ಹಾಗೂ ಯುನಿಟ್ ಘಟಕಗಳು ಸದಸ್ಯತ್ವ ಅಭಿಯಾನಕ್ಕೆ ಸಕ್ರಿಯ ಸಹಕಾರ ನೀಡಬೇಕು. ತಮ್ಮ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರದೇಶಗಳಿಂದ ಉದ್ಯೋಗ ಹಾಗೂ ವ್ಯಾಪಾರ ನಿಮಿತ್ತ ವಿದೇಶಗಳಿಗೆ ತೆರಳಿರುವ ಮುಸ್ಲಿಂ ಸಹೋದರರನ್ನು ಸಂಪರ್ಕಿಸಿ, ಕೆಸಿಎಫ್ನ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡುವ ಮೂಲಕ ಅವರನ್ನು ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ರಾಜ್ಯ ಸಮಿತಿ ಮನವಿ ಮಾಡಿದೆ.
ಅನಿವಾಸಿ ಕನ್ನಡಿಗರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವುದರೊಂದಿಗೆ ಅವರಲ್ಲಿ ಪರಸ್ಪರ ಸಹಕಾರ, ಸಾಮಾಜಿಕ ಬದ್ಧತೆ ಮತ್ತು ತಾಯ್ನಾಡಿನೊಂದಿಗೆ ಆತ್ಮೀಯ ಸಂಬಂಧವನ್ನು ಬೆಳೆಸುವ ಕೆಸಿಎಫ್ನ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ.
ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕೆಸಿಎಫ್ ರಾಷ್ಟ್ರೀಯ ಡೈರೆಕ್ಟರೇಟ್ ಕಾರ್ಯದರ್ಶಿ ಮುಹಮ್ಮದ್ ಆಸಿಫ್ (9964242233) ಅವರನ್ನು ಸಂಪರ್ಕಿಸಬಹುದಾಗಿದೆ.
ಕೆಸಿಎಫ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ SSF ಕರ್ನಾಟಕ ರಾಜ್ಯ ಸಮಿತಿಯ ಎಲ್ಲಾ ಹಂತದ ನಾಯಕರು ಹಾಗೂ ಕಾರ್ಯಕರ್ತರು ಅಗತ್ಯ ಸಹಕಾರ ನೀಡಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ನಕಲಿ ದಾಖಲೆ ದೃಢೀಕರಣ ಜಾಲ: ಭಾರತೀಯ ರಾಯಭಾರ ಕಚೇರಿಯಿಂದ ಎಚ್ಚರಿಕೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇಕ್ಬಾಲ್ ಬಾಳಿಲರಿಗೆ SKSSF ರಾಜ್ಯ ಸಮಿತಿಯಿಂದ ಸನ್ಮಾನ
ಮದೀನಾ ತಲುಪಬೇಕೆಂಬ ತಾಯಿಯ ಕೊನೆಯ ಆಸೆ ಈಡೇರಿತು- ಜನ್ನತುಲ್ ಬಕೀಹ್ನಲ್ಲಿ ಅಂತ್ಯಕ್ರಿಯೆ
ಎಸ್ಐಆರ್ ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ರಾಜ್ಯಾದ್ಯಂತ SKSSF ಬೃಹತ್ ಪ್ರತಿಭಟನೆ
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ಸಮಸ್ತ ಉಪಾಧ್ಯಕ್ಷ ಸಯ್ಯಿದ್ ಅಲಿ ಬಾಫಖಿ ತಂಙಳ್ ವಫಾತ್
ದಕ್ಷಿಣ ಕನ್ನಡ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ಬಹರೈನ್: ನೂತನ ಪದಾಧಿಕಾರಿಗಳು
ಇಕ್ಬಾಲ್ ಬಾಳಿಲರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹಾಲು–ಮೊಸರಿನ ದರ ಏರಿಕೆ: ಪರ್ಯಾಯದ ಹೆಸರಿನಲ್ಲಿ ಕಲಬೆರಕೆಯ ಅಪಾಯ
ಅಲ್ ಮದೀನದಲ್ಲಿ ವಿಜೃಂಭಿಸಿದ ವಿದ್ಯಾರ್ಥಿಗಳ ಸಾಹಿತ್ಯ–ಸಾಂಸ್ಕೃತಿಕ ಸಂಗಮ ‘ಗುಲ್ಶನ್’