janadhvani

Kannada Online News Paper

ಕೇಂದ್ರ ಸರಕಾರ ವಿರುದ್ದ 15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅವಿಶ್ವಾಸ ಗೊತ್ತುವಳಿ ಮಂಡನೆ

ನವದೆಹಲಿ: 15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಎನ್’ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ.
ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚರ್ಚೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕಾದು ನೋಡಬೇಕಿದೆ.
ಕಾಂಗ್ರೆಸ್, ಸಮಾಜವಾದಿ ಪಕ್ಷ(ಎಸ್ಪಿ), ತೆಲುಗುದೇಶಂ(ಟಿಡಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಂಡಿಸಿರುವ ಈ ಗೊತ್ತುವಳಿಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.
ಜುಲೈ 20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆಗೆ ಅವಕಾಶ ನೀಡಿದ್ದಾರೆ.

error: Content is protected !! Not allowed copy content from janadhvani.com