ನವದೆಹಲಿ: 15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ.
ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚರ್ಚೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕಾದು ನೋಡಬೇಕಿದೆ.
ಕಾಂಗ್ರೆಸ್, ಸಮಾಜವಾದಿ ಪಕ್ಷ(ಎಸ್ಪಿ), ತೆಲುಗುದೇಶಂ(ಟಿಡಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಂಡಿಸಿರುವ ಈ ಗೊತ್ತುವಳಿಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್’ಡಿಎ ಸರ್ಕಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.
ಜುಲೈ 20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಈ ಕುರಿತು ಚರ್ಚೆಗೆ ಅವಕಾಶ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ